ಬೆಳಗಾವಿ : ದೇಶಾದ್ಯಂತ ಮತ್ತೆ ಕೊರೊನಾ ವೈರಸ್ ಸೋಂಕಿನ ಆತಂಕ ಶುರುವಾಗಿದ್ದು, ಇದಿಗ ಬೆಳಗಾವಿಗೂ ಕೊರೊನಾ ವೈರಸ್ ಸೋಂಕು ಕಾಲಿಟ್ಟಿದೆ.
ಹೌದು ಬೆಳಗಾವಿ ನಗರದಲ್ಲಿ ಮಹಿಳೆಯೊಬ್ಬರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಬೇರೆ ಬೇರೆ ಕಾರಣಗಳಿಂದ ನ್ಯುಮೋನಿಯಾದಿಂದ ಬಳಲುತ್ತಿದ್ದ 25 ವರ್ಷದ ಗರ್ಭಿಣಿ ಮಹಿಳೆಗೆ ಸೋಂಕು ದೃಢಪಟ್ಟಿದೆ.
ಬೆಳಗಾವಿ ನಗರದಬೆಳಗಾವಿ ನಗರದಲ್ಲಿ ವಾಸಿಸುತ್ತಿದ್ದ ಮಹಿಳೆಗೆ ಸೋಂಕು ತಗುಲಿದ್ದು, ಈಕೆ ಕಳೆದ ಕೆಲವು ದಿನಗಳ ಹಿಂದೆ ಮಹಾರಾಷ್ಟ್ರದ ಪುಣೆಗೆ ಹೋಗಿ ಬಂದಿದ್ದರು ಎನ್ನಲಾಗಿದೆ.