ಬಾಗಲಕೋಟೆ : ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇರೆಗೆ ರಾಮಮಂದಿರ ಮಠದ ಲೋಕೇಶ್ವರ ಮಹಾರಾಜ ಸ್ವಾಮೀಜಿ ಬಂಧಿಸಲಾಗಿದೆ.
ರಾಯಭಾಗ ತಾಲೂಕಿನ ಮೇಖಳಿಯ ರಾಮಮಂದಿರ ಮಠದ ಲೋಕೇಶ್ವರ ಮಹಾರಾಜನ ಸ್ವಾಮೀಜಿ ವಿರುದ್ಧ ಪೊಲೀಸರು ಪೋಕ್ಸೋ ಕೇಸ್ ದಾಖಲಿಸಿಕೊಂಡು ಬಂಧಿಸಿದ್ದಾರೆ.
ಮೇ.13 ರಂದು ಬಾಲಕಿಯನ್ನು ಲಾಡ್ಜ್ ಗೆ ಕರೆದೊಯ್ದು ಅತ್ಯಾಚಾರ ಎಸಗಿ ನಂತರ ಬಾಗಲಕೋಟೆಯ ಮಹಾಲಿಂಗಪುರ ಬಸ್ ನಿಲ್ದಾಣದಲ್ಲಿ ಬಿಟ್ಟು ಹೋಗಲಾಗಿದೆ.ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ಸ್ವಾಮೀಜಿಯನ್ನು ಬಂಧಿಸಿದ್ದಾರೆ. ಲೋಕೇಶ್ವರ ಸ್ವಾಮೀಜಿ ತನ್ನ ಜೊತೆ ಅಪ್ರಾಪ್ತೆಯನ್ನು ರಾಯಚೂರು, ಬಾಗಲಕೋಟೆಯ ಲಾಡ್ಜ್ಗಳಿಗೆ ಕರೆದುಕೊಂಡು ಹೋಗಿ 2 ದಿನಗಳ ಕಾಲ ಆಕೆ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಹೇಳಲಾಗಿದೆ.