ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ಘೋರ ದುರಂತವೊಂದು ನಡೆದಿದ್ದು, ಅಡುಗೆ ಎಣ್ಣೆ ಮಿಲ್ ನಲ್ಲಿ ಬಾಯ್ಲರ್ ಸ್ಫೋಟಗೊಂಡು ಕಾರ್ಮಿಕರೊಬ್ಬರು ಸಾವನ್ನಪ್ಪಿದ್ದಾರೆ.
ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿಯ ರಹಮತ್ ನಗರದಲ್ಲಿ ಅಡುಗೆ ಎಣ್ಣೆ ಮಿಲ್ ನ ಬಾಯ್ಲರ್ ಸ್ಫೋಟಗೊಂಡು ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ರಫಿಕ್ ಸೈಯದ್ ಕುಡುಚಿ (35) ಮೃತಪಟ್ಟಿದ್ದಾರೆ.
ಜಮಖಂಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.