ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನಾಳೆಯಿಂದ ಕೋವಿಡ್ ಟೆಸ್ಟ್ ಮಾಡಲು ನಿರ್ಧರಿಸಲಾಗಿದೆ.
ರಾಜ್ಯದಲ್ಲಿ 35 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನಾಳೆಯಿಂದ ಕೋವಿಡ್ ಟೆಸ್ಟ್ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ರಾಜ್ಯದ ಮೆಡಿಕಲ್ ಕಾಲೇಜು ಆಸ್ಪತ್ರೆ, ಜಿಲ್ಲಾಸ್ಪತ್ರೆಗಳಲ್ಲಿ ಕೊರೊನಾ ಟೆಸ್ಟ್ ಮಾಡಲು ನಿರ್ಧರಿಸಲಾಗಿದೆ. ಈ ಮೂಲಕ ರಾಜ್ಯದಲ್ಲಿ ಮತ್ತೆ ಕೋವಿಡ್ ಟೆಸ್ಟ್ ಲ್ಯಾಬ್ ಓಪನ್ ಮಾಡಲು ಸಿದ್ಧತೆ ನಡೆಸಲಾಗಿದೆ.







