ಮೈಸೂರು : ಮೈಸೂರಿನಲ್ಲಿ ಇಂದು ಘೋರವಾದ ದುರಂತ ಒಂದು ಸಂಭವಿಸಿದ್ದು, ಕೆರೆಗೆ ಹಾರಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಹೆಚ್‍ಡಿ ಕೋಟೆ ತಾಲೂಕಿನ ಬೂದನೂರಿನಲ್ಲಿ ಈ ಒಂದು ಘಟನೆ ನಡೆದಿದೆ.
ಮೃತರನ್ನು ಮಹದೇವಸ್ವಾಮಿ, ಪತ್ನಿ ಮಂಜುಳಾ ಹಾಗೂ ಪುತ್ರಿ ಹರ್ಷಿತ ಇದೀಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಮೃತ ಮಹದೇವಸ್ವಾಮಿ ಹಿರಿಯ ಪುತ್ರಿ ಅರ್ಪಿತ ಮನೆ ಬಿಟ್ಟು ಹೋಗಿದ್ದಾಳೆ. ಯುವಕನೋರ್ವನನ್ನು ಪ್ರೀತಿಸಿ ಅರ್ಪಿತ ಮನೆ ಬಿಟ್ಟು ಹೋಗಿದ್ದಾಳೆ.
ಹಾಗಾಗಿ ಮನನೊಂದು ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಬೂದನೂರು ಕೆರೆಯ ಏರಿಯ ಮೇಲೆ ಬೈಕ್ ಹಾಗೂ ಮೂವರ ಚಪ್ಪಲಿ ಪತ್ತೆಯಾಗಿದೆ. ನಾಪತ್ತೆಯಾಗಿರುವ ಮೂವರಿಗಾಗಿ ಇದೀಗ ತೀವ್ರ ಹುಡುಕಾಟ ನಡೆಸಲಾಗುತ್ತಿದೆ. ಘಟನೆ ಕುರಿತು ಎಚ್ ಡಿ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.