ಮೈಸೂರು : ಮೈಸೂರಿನಲ್ಲಿ ಮತ್ತೊಂದು ಘೋರವಾದ ದುರಂತ ಒಂದು ಸಂಭವಿಸಿದ್ದು, ಟಿಪ್ಪರ್ ಟಾಟಾ ಏಸ್ ನಡುವೆ ಡಿಕ್ಕಿಯಾಗಿ ಮಕ್ಕಳು ಸೇರಿದಂತೆ ಹಲವರು ಗಾಯಗೊಂಡಿರುವ ಘಟನೆ ಮೈಸೂರು ಜಿಲ್ಲೆಯ ಹೆಚ್‍ಡಿ ಕೋಟೆ ತಾಲೂಕಿನ ಗುಜ್ಜೆಗೌಡನಪುರ ಬಳಿ ಈ ಒಂದು ಭೀಕರವಾದ ಅಪಘಾತ ಸಂಭವಿಸಿದೆ.
ಮೈಸೂರು ಜಿಲ್ಲೆಯ ಎಚ್ ಡಿ ಕೋಟೆ ತಾಲೂಕಿನ ಗುಜ್ಜೇಗೌಡನಪುರದ ಗ್ರಾಮಸ್ಥರು ಬಸವ ಜಯಂತಿ ಕಾರ್ಯಕ್ರಮಕ್ಕೆ ಮೈಸೂರಿಗೆ ತೆರಳುತ್ತಿದ್ದರು. ಕಟ್ಟೆಮನುಗನಹಳ್ಳಿ ಇಂದ ಟಾಟಾ ಏಸ್ ವಾಹನದಲ್ಲಿ ತೆರಳುತ್ತಿದ್ದರು. ಟಾಟಾ ಏಸ್ ನಲ್ಲಿದ್ದ ಮಕ್ಕಳು ಸೇರಿದಂತೆ ಹಲವರಿಗೆ ಗಂಭೀರವಾದ ಗಾಯಗಳಾಗಿವೆ. ತಕ್ಷಣ ಗಾಯಾಳುಗಳನ್ನು ಕೆ.ಆರ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಎಚ್ ಡಿ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.