ಬೆಂಗಳೂರು : ಈಗಾಗಲೇ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣ ಅಬ್ಬರಿಸುತ್ತಿದ್ದಾನೆ. ಈ ಹಿನ್ನೆಲೆಯಲ್ಲಿ ಭಾರಿ ಮಳೆಯಿಂದಾಗಿ ಹಲವು ಕಡೆಗೆ ಅವಾಂತರ ಸೃಷ್ಟಿಯಾಗಿದ್ದು, ಇದುವರೆಗೂ, ವರುಣ ಆರ್ಭಟಕ್ಕೆ ಹಲವು ಜನರು ಸಾವನಪ್ಪಿದ್ದಾರೆ. ಇದೀಗ ಅರಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ರಾಜ್ಯದ 6 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಹೌದು ರಾಜ್ಯದ 6 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮೇ 24 ರಿಂದ 27 ರ ವರೆಗೂ ರಾಜ್ಯದಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹವಾಮಾನ ಇಲಾಖೆಯ ತಜ್ಞ ಸಿ.ಎಸ್ ಪಾಟೀಲ್ ಈ ಕುರಿತು ಹೇಳಿಕೆ ನೀಡಿದ್ದಾರೆ. ಉತ್ತರಕನ್ನಡ, ದಕ್ಷಿಣಕನ್ನಡ, ಉಡುಪಿ, ಶಿವಮೊಗ್ಗ ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ಇದೀಗ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಪೂರ್ವ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ರಾಜ್ಯದ ಆರು ಜಿಲ್ಲೆಗಳಲ್ಲಿ ಇದೀಗ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.