ಶಿವಮೊಗ್ಗ: : ಇಂದು ನಿಗದಿಯಾಗಿದ್ದ ಕುವೆಂಪು ವಿವಿಯ ಬಿ. ಎ. ಆರನೇ ಸೆಮೆಸ್ಟರ್ ಕನ್ನಡ ಐಚ್ಛಿಕ ಪತ್ರಿಕೆಯ ಪರೀಕ್ಷೆ ಯನ್ನು ಪ್ರಶ್ನೆ ಪತ್ರಿಕೆಯ ಗೊಂದಲದಿಂದ ಮುಂದೂಡಲಾಗಿದ್ದು, ಪರೀಕ್ಷೆಯ ದಿನಾಂಕವನ್ನು ನಂತರ ಪ್ರಕಟಿಸಲಾಗುವುದು.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಪರೀಕ್ಷಾಂಗ ಕುಲಸಚಿವ ಪ್ರೊ. ಎಸ್. ಎಂ. ಗೋಪಿನಾಥ್, ಕನ್ನಡ ವಿಷಯದ ಪರೀಕ್ಷಾ ಮಂಡಳಿಯ ಅಧ್ಯಕ್ಷರನ್ನು ಕರೆಸಿ ಪರೀಕ್ಷಾ ವಿಭಾಗದಲ್ಲಿ ವಿಚಾರಣೆ ನಡೆಸಿದ್ದು, ಪ್ರಶ್ನೆ ಪತ್ರಿಕೆ ಸಿದ್ದಪಡಿಸಿ, ಪರಿಶೀಲನೆ ನಡೆಸಿದ ಅಧ್ಯಾಪಕರುಗಳು ಮತ್ತು ಅಧ್ಯಕ್ಷರು ಹೊಣೆಗಾರರಾಗಿರುತ್ತಾರೆ. ಈ ಕುರಿತು ಪರೀಕ್ಷಾ ಮಂಡಳಿಯ ಅಧ್ಯಕ್ಷರು ತಪ್ಪೊಪ್ಪಿಗೆಯ ಪತ್ರ ಸಲ್ಲಿಸಿದ್ದು, ಸಂಬಂಧಪಟ್ಟವರ ಮೇಲೆ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು.
“ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದು, ವಿಶ್ವವಿದ್ಯಾಲಯದ ಘನತೆಗೆ ಕುಂದು ತಂದಿರುವ ಮತ್ತು ವಿದ್ಯಾರ್ಥಿಗಳಿಗೆ ತೊಡಕು ಉಂಟು ಮಾಡಿರುವ ಈ ಪ್ರಕರಣಕ್ಕೆ ಸಂಬಂಧಪಟ್ಟವರ ಮೇಲೆ ಪರೀಕ್ಷಾ ಕಾಯ್ದೆಯ ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ತಿಳಿಸಿದ್ದಾರೆ.
ನೀವು ವ್ಯಾಯಾಮ ಮಾಡಿದರೂ, ಹೆಚ್ಚು ಕುಳಿತುಕೊಳ್ಳುವುದರಿಂದ ಮೆದುಳಿನ ಮೇಲೆ ಪರಿಣಾಮ: ಅಧ್ಯಯನ | Excessive Sitting
BIG NEWS: ರಾಜ್ಯದಲ್ಲೊಂದು ಹೃದಯ ವಿದ್ರಾವಕ ಘಟನೆ: ಮಗಳು ಮನೆ ಬಿಟ್ಟು ಹೋಗಿದ್ದಕ್ಕೆ ಮೂವರು ಆತ್ಮಹತ್ಯೆ