ಬೆಂಗಳೂರು : ಬೆಂಗಳೂರಿನಲ್ಲಿ ಅಕ್ರಮವಾಗಿ ಪಿಸ್ತೂಲ್ ಮಾರಾಟಕ್ಕೆ ಮಾಡುತ್ತಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಅಕ್ರಮವಾಗಿ ನಾಡಪಿಸ್ತೂಲ್ ತಂದು ಮಾರಾಟ ಮಾಡುತ್ತಿದ್ದ ರೌಡಿ ಶೀಟರ್ ಸಮೀರ್ ನನ್ನು ಇದೀಗ ಬೆಂಗಳೂರಿನ ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಬಂಧಿತ ಸಮೀರ್ ಕೆ ಜಿ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿಶೀಟರ್ ಎಂದು ತಿಳಿದುಬಂದಿದೆ. ದೆಹಲಿಯಲ್ಲಿ ಕಡಿಮೆ ಬೆಲೆಗೆ ಖರೀದಿಸುತ್ತಿದ್ದ. ಬೆಂಗಳೂರಿನಲ್ಲಿ ಹೆಚ್ಚು ಹಣಕ್ಕೆ ಗನ್ ಮಾರಾಟ ಮಾಡುತ್ತಿದ್ದ. ರೌಡಿಶೀಟರ್ ಗಳಿಗೆ ಗನ್ ಮಾರಾಟ ಮಾಡುತ್ತಿದ್ದ ಆರೋಪಿ ಸಮೇತ ಆರೋಪಿಯನ್ನು ಬಂಧಿಸಿ ಎರಡು ನಾಡಪಿಸ್ತುಲ್ ಸಿಸಿಬಿ ಪೊಲೀಸ್ ವಶಕ್ಕೆ ಪಡೆದುಕೊಂಡಿದೆ.