ಬೆಂಗಳೂರು: ನಗರದಲ್ಲಿ ಸಂಚಾರ ದಟ್ಟಣೆ ಕಡಿಮೆ ಮಾಡುವ ನಿಟ್ಟಿನಿಂದ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಬೆಂಗಳೂರಲ್ಲಿ 114 ಕಿಲೋಮೀಟರ್ ಎಲಿವೆಟೆಡ್ ಕಾರಿಡಾರ್ ನಿರ್ಮಾಣಕ್ಕೆ ನಿರ್ಧರಿಸಿದೆ. ಅಲ್ಲದೇ ಎರಡು ಹಂತದಲ್ಲಿ ಸುರಂಗ ರಸ್ತೆ ನಿರ್ಮಾಣಕ್ಕೂ ಸಂಪುಟ ಸಭೆ ಒಪ್ಪಿಗೆ ಸೂಚಿಸಿದೆ.
ಇಂದು ಈ ಬಗ್ಗೆ ಸುದ್ದಿಗಾರರೊಂದಿಗೆ ಮಾಹಿತಿ ಹಂಚಿಕೊಂಡ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು, ಬೆಂಗಳೂರಲ್ಲಿ ಎಲಿವೆಟೆಡ್ ಕಾರಿಡಾರ್ ನಿರ್ಮಾಣಕ್ಕೆ ತೀರ್ಮಾನಿಸಿದ್ದೇವೆ. ಬೆಂಗಳೂರಿನಲ್ಲಿ 114 ಕಿಲೋಮೀಟರ್ ಎಲಿವೆಟೆಡ್ ಕಾರಿಡಾರ್ ನಿರ್ಮಿಸಲಾಗುತ್ತಿದೆ. ಈ ಯೋಜನೆ ಸಂಬಂಧ ಅಭಿಪ್ರಾಯ ಪಡೆಯಲಾಗಿದೆ. ಸಂಚಾರ ಪೊಲೀಸ್ ಅಧಿಕಾರಿಗಳ ಅಭಿಪ್ರಾಯ ಪಡೆದಿದ್ದೇವೆ ಎಂದರು.
ಬೆಂಗಳೂರಿನಲ್ಲಿ 2 ಹಂತದ ಸುರಂಗ ರಸ್ತೆ ನಿರ್ಮಾಣಕ್ಕೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತಿದೆ. ಮೊದಲ ಹಂತಕ್ಕೆ ಶೀಘ್ರವೇ ಟೆಂಡರ್ ಕರೆಯಲಾಗುವುದು. ಬೆಂಗಳೂರಿನ ಸುರಂಗ ರಸ್ತೆಯ ಪ್ರವೇಶ ಹಾಗೂ ನಿರ್ಗಮನದ ಭಾಗದಲ್ಲಿ ಸಂಚಾರ ದಟ್ಟಣೆ ಆಗಬಾರದು. ಈ ಉದ್ದೇಶದಿಂದ ಯೋಜನೆಗೆ ಟೆಂಡರ್ ಕರೆಯುವ ಮುನ್ನ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಧಿಕಾರಿಗಳು, ಡಿಜಿ ಮತ್ತು ಐಜಿಪಿ, ಸಂಚಾರ ಪೊಲೀಸ್ ಅಧಿಕಾರಿಗಳ ಜೊತೆಗೆ ಸಭೆ ನಡೆಸಲಾಗುತ್ತದೆ ಎಂದರು.
ವಿಧಾನಸೌಧದ 1 ಕಿಲೋಮೀಟರ್ ಸುತ್ತಮುತ್ತ ನಿರ್ಗಮನಕ್ಕೆ ಅವಕಾಶವಿಲ್ಲ. ಇಲ್ಲಿ ಟ್ರಾಫಿಕ್ ಜಾಮ್ ಆದರೆ ಎಲ್ಲಾ ಕಡೆ ಆಗುತ್ತದೆ. ಇದನ್ನು ಪರಿಶೀಲಿಸಲು ಅಧಿಕಾರಿಗಳಿಗೆ ತಿಳಿಸಿದ್ದೇನೆ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದರು.
ಮೇ.28ರವರೆಗೆ ರಾಜ್ಯದೆಲ್ಲೆಡೆ ಭಾರೀ ಮಳೆ: ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ | Rain In Karnataka
BIG NEWS: ರಾಜ್ಯದಲ್ಲೊಂದು ಹೃದಯ ವಿದ್ರಾವಕ ಘಟನೆ: ಮಗಳು ಮನೆ ಬಿಟ್ಟು ಹೋಗಿದ್ದಕ್ಕೆ ಮೂವರು ಆತ್ಮಹತ್ಯೆ