ಕಲಬುರ್ಗಿ : ಕಲ್ಬುರ್ಗಿಯಲ್ಲಿ ಘೋರವಾದಂತಹ ದುರಂತ ಒಂದು ಸಂಭವಿಸಿದ್ದು, ಪರಸ್ಪರ ಎರಡು ಬೈಕುಗಳು ಡಿಕ್ಕಿಯಾಗಿ ಹೊತ್ತಿ ಉರಿದಿವೆ ಈ ವೇಳೆ ಮೈ ಮೇಲೆ ಪೆಟ್ರೋಲ್ ಬಿದ್ದು ಬೆಂಕಿ ತೆಗೆದುವಾಗಿ ದಹನಗೊಂಡಿರುವ ಘಟನೆ ಕಲ್ಬುರ್ಗಿ ಜಿಲ್ಲೆಯ ಕಾಳಗಿ ಪಟ್ಟಣದ ಕೊಡದೂರಿನಲ್ಲಿ ನಡೆದಿದೆ.
ಕಲ್ಬುರ್ಗಿ ಜಿಲ್ಲೆಯ ಕಾಳಗಿ ಪಟ್ಟಣದ ಕೊಡದೂರಿನಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ. ಅವಘಡದಲ್ಲಿ ಬೈಕ್ ಸವಾರ ದಶರತ್ ಮಡಿವಾಳ (28) ಸಜೀವ ದಹನ ಹೊಂದಿದ್ದಾರೆ. ಪರಸ್ಪರ ಬೈಕ್ ಗಳು ಡಿಕ್ಕಿ ಆದ ಪರಿಣಾಮ ಮೈ ಮೇಲೆ ಪೆಟ್ರೋಲ್ ಬಿದ್ದು ದಶರಥ ಸಾವನ್ನಪ್ಪಿದ್ದಾರೆ.ಇನ್ನು ಘಟನೆಯಲ್ಲಿ ಓರ್ವನಿಗೆ ಗಂಭೀರವಾದ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.