ಬೆಂಗಳೂರು : ರಾಜ್ಯಕ್ಕೆ ಕೊರೊನಾ ಮತ್ತೆ ಒಕ್ಕರಿಸಿದೆ. ರಾಜ್ಯಾದ್ಯಂತ 38 ಸಕ್ರಿಯ ಪ್ರಕರಣಗಳು ದೃಢಪಟ್ಟಿದ್ದು, ಅದರಲ್ಲಿ 32 ಬೆಂಗಳೂರಿನಲ್ಲಿವೆ. ವಿಜಯನಗರ, ಮೈಸೂರು ಮತ್ತು ಬೆಳಗಾವಿ ಜಿಲ್ಲೆಗಳಲ್ಲಿಯೂ ಕೊರೊನಾ ಸೋಂಕು ಕಾಲಿಟ್ಟಿದೆ. ಕೊರೊನಾದಿಂದ ಬೆಂಗಳೂರಿನಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಆರೋಗ್ಯ ಇಲಾಖೆ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.
ಹೌದು ನಿನ್ನೆ ಬೆಂಗಳೂರಿನಲ್ಲಿ ವೈಟ್ ಫೀಲ್ಡ್ ನ 85 ವರ್ಷದ ವೃದ್ಧ ಕೊರೊನಾ ಸೋಂಕಿಗೆ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಒಟ್ಟು 38 ಸಕ್ರಿಯ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಅವುಗಳಲ್ಲಿ 32 ಬೆಂಗಳೂರಿನಲ್ಲಿ ದೃಢಪಟ್ಟಿವೆ.ನಿನ್ನೆ ವಿಜಯನಗರ ಜಿಲ್ಲೆಯಲ್ಲಿ ಒಬ್ಬರು, ಮೈಸೂರಿನಲ್ಲಿ ಇಬ್ಬರಿಗೆ ಮತ್ತು ಬೆಂಗಳೂರಿನಲ್ಲಿ ಇಬ್ಬರಿಗೆ ಕೊರೊನಾ ಸೋಂಕು ತಗುಲಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಕೋವಿಡ್ ಹೆಚ್ಚಳ ಹಿನ್ನೆಲೆಯಲ್ಲಿ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಸಲಾಗಿತ್ತು. ಸಭೆಯಲ್ಲಿ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ತಾಂತ್ರಿಕ ಸಲಹಾ ಸಮಿತಿ ಸದಸ್ಯರು ಕೆಲ ಸಲಹೆಗಳನ್ನು ನೀಡಿದ್ದಾರೆ. ಸಲಹಾ ಸಮಿತಿ ಸೂಚನೆ ಮೇರೆಗೆ ಇಂದಿನಿಂದ ದಿಂದ ರಾಜ್ಯದ 8 ಮೆಡಿಕಲ್ ಕಾಲೇಜುಗಳಲ್ಲಿ ಕೋವಿಡ್ ಟೆಸ್ಟ್ ಮತ್ತೆ ಆರಂಭಿಸುವಂತೆ ಸಚಿವರು ಸೂಚನೆ ನೀಡಿದ್ದಾರೆ. ಬೆಂಗಳೂರಿನಲ್ಲಿಯೇ ಹೆಚ್ಚು ಕೋವಿಡ್ ಟೆಸ್ಟ್ ಮಾಡಲು ಸೂಚನೆ ನೀಡಲಾಗಿದೆ.