ಬೆಂಗಳೂರು : ಪೂರ್ವ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಕಾರಣ, ರಾಜ್ಯದ ಆರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಹೀಗಾಗಿ ರೆಡ್ ಅಲರ್ಟ್ ಅನ್ನು ಹವಾಮಾನ ಇಲಾಖೆ ಘೋಷಿಸಿದೆ. ಇದಲ್ಲದೇ ರಾಜ್ಯದ ವಿವಿಧೆಡೆ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ನೀಡಿದೆ.
ಈ ಬಗ್ಗೆ ಹವಾಮಾನ ಇಲಾಖೆಯ ತಜ್ಞ ಸಿಎಸ್ ಪಾಟೀಲ್ ಮಾಹಿತಿ ನೀಡಿದ್ದು, ಮೇ.24ರಿಂದ ಮೇ.27ರವರೆಗೆ ರಾಜ್ಯದ ಆರು ಜಿಲ್ಲೆಗಳಲ್ಲಿ ಪೂರ್ವ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಪರಿಣಾಮವಾಗಿ ಭಾರೀ ಮಳೆಯಾಗಲಿದೆ. ಹೀಗಾಗಿ 6 ಜಿಲ್ಲೆಗಳಲ್ಜ್ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದಿದ್ದಾರೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಭಾಗದಲ್ಲಿ ವ್ಯಾಪಕ ಮಳೆಯ ಎಚ್ಚರಿಕೆಯನ್ನು ನೀಡಿದ್ದು, ಮೇ 24ರಿಂದ ಮೇ 27ರವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಹಾಸನ, ಧಾರವಾಡ, ಚಾಮರಾಜನಗರ ಜಿಲ್ಲೆಗೆ ಆರೆಂಟ್ ಅಲರ್ಟ್ ಘೋಷಿಸಿದ್ದು, ಉಳಿದ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.