ಬೆಂಗಳೂರು : ರಾಜಧಾನಿ ಬೆಂಗಳೂರು ಸೇರಿದಂತೆ ಬಳ್ಳಾರಿ ವಿಜಯನಗರ ಬೆಳಗಾವಿಯಲ್ಲಿ ಇದೀಗ ಕರೋನ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು ಹಿಂದೂ ಸಹ ಬೆಂಗಳೂರಿನಲ್ಲಿ ಎರಡು ಕರೋನಾ ಕೇಸ್ ಪತ್ತೆಯಾಗಿವೆ. ಹಾಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ, ಆಸ್ಪತ್ರೆಯಲ್ಲಿರುವ ಗರ್ಭಿಣಿ ಹಾಗೂ ಬಾಣಂತಿಯರ ಮೇಲೆ ತೀವ್ರ ನಿಗಾ ಇಡಲಾಗಿದೆ.
ಗರ್ಭಿಣಿಯರು ಹಾಗೂ ಬಾಣಂತಿಯರ ಮೇಲೆ ಹೆಚ್ಚಿನ ನಿಗಾ ವಹಿಸಲಾಗಿದೆ. ಆಸ್ಪತ್ರೆಗಳಲ್ಲಿ ಗರ್ಭಿಣಿಯರು ಮತ್ತು ಬಾಣಂತಿಯರಿಗೆ ಇದೀಗ ಕೋವಿಡ್ ಟೆಸ್ಟ್ ನಡೆಸಲಾಗುತ್ತಿದೆ. ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಲು ವೈದ್ಯರು ಬಾಣಂತಿಯರಿಗೆ ಮತ್ತು ಗರ್ಭಿಣಿಯರಿಗೆ ಸೂಚನೆ ನೀಡಿದ್ದಾರೆ.
ಗರ್ಭಿಣಿಯರು ಹಾಗೂ ಬಾಣಂತಿಯರು ಎಚ್ಚರ ವಹಿಸಬೇಕು. ಮಾಸ್ಕ ಧರಿಸಬೇಕು ಹಾಗೂ ಜನಸಂದಣಿ ಸ್ಥಳಗಳಲ್ಲಿ ಓಡಾಡಬೇಡಿ. ಮಗುವಿನ ಮೇಲೆಯೂ ಪರಿಣಾಮ ಬೀರುವ ಸಾಧ್ಯತೆ ಇರುತ್ತದೆ. ಮಗುವಿನ ಆರೋಗ್ಯದ ದೃಷ್ಟಿಯಿಂದ ಬಾಡಂತಿಯರು ಎಚ್ಚರಿಕೆ ವಹಿಸಬೇಕು ಎಂದು ವೈದ್ಯರು ಸೂಚನೆ ನೀಡಿದ್ದಾರೆ.