ಬೆಂಗಳೂರು : ಕಳೆದ ಕೆಲವು ತಿಂಗಳ ಹಿಂದೆ ಬೆಂಗಳೂರಿನಲ್ಲಿ ರೇವ್ ಪಾರ್ಟಿ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ತೆಲುಗು ನಟಿ ಹೇಮಾ ಜೈಲುವಾಸ ಅನುಭವಿಸಿ ಇತ್ತೀಚಿಗೆ ಬಿಡುಗಡೆಯಾಗಿದ್ದರು. ಇದೀಗ ಬೆಂಗಳೂರಿನಲ್ಲಿ ಮತ್ತೊಂದು ರೇವ್ ಪಾರ್ಟಿ ಪ್ರಕರಣ ಬೆಳಕಿಗೆ ಬಂದಿದ್ದು, ರೇವ್ ಪಾರ್ಟಿ ನಡೆಸುತ್ತಿದ್ದ ಫಾರ್ಮ್ ಹೌಸ್ ಮೇಲೆ ಬೆಂಗಳೂರಿನ ದೇವನಹಳ್ಳಿ ಠಾಣೆ ಪೋಲೀಸರು ದಾಳಿ ಮಾಡಿದ್ದಾರೆ.
ಹೌದು ರೇವ್ ಪಾರ್ಟಿ ಮಾಡುತ್ತಿದ್ದ ಫಾರ್ಮೌಸ್ ಮೇಲೆ ಇದೀಗ ಪೊಲೀಸರು ದಾಳಿ ಮಾಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ರೇವ್ ಪಾರ್ಟಿ ನಡೆಸಲಾಗುತ್ತಿತ್ತು. ಇದೀಗ ರೇವ್ ಪಾರ್ಟಿ ನಡೆಸುತ್ತಿದ್ದ ಫಾರ್ಮ್ ಹೌಸ್ ಮೇಲೆ ದೇವನಹಳ್ಳಿ ಪೊಲೀಸರು ದಾಳಿ ಮಾಡಿದ್ದಾರೆ.
ಫಾರ್ಮ್ ಹೌಸ್ ನಲ್ಲಿ ರೇವ್ ಪಾರ್ಟಿ ನಡೆಸುತ್ತಿದ್ದ 10 ಯುವತಿಯರು ಹಾಗೂ 20 ಯುವಕರನ್ನು ತಪಾಸಣೆ ನಡೆಸುತ್ತಿದ್ದಾರೆ. ಅಲ್ಲದೇ ಪಾರ್ಟಿಯ ಸ್ಥಳದಲ್ಲಿ ಡ್ರಗ್ಸ್ ಮತ್ತು ಕಾಂಚಾಪತ್ತಿಯಾಗಿದೆ ದೇವನಹಳ್ಳಿ ಎಸಿಪಿ ನವೀನ ನೇತೃತ್ವದಲ್ಲಿ ಯುವಕ ಮತ್ತು ಯುವತಿಯನ್ನು ವಿಚಾರಣೆಗೆ ಒಳಪಡಿಸಲಾಗಿದೆ.