ಬೆಳಗಾವಿ : ರಾಜ್ಯದಲ್ಲಿ ಮಹಾಮಳೆಗೆ ಮತ್ತೊಂದು ಬಲಿಯಾಗಿದ್ದು, ಗೋಡೆ ಕುಸಿದು 3 ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ನಡೆದಿದೆ.
ಬೆಳಗಾವಿ ಜಿಲ್ಲೆ ಗೋಕಾಕ್ ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಲಗಿದ್ದಾಗ ಗೋಡೆ ಕುಸಿದು ಬಾಲಕಿ ಸಾವನ್ನಪ್ಪಿದ್ದಾಳೆ. ಮೃತ ಬಾಲಕಿಯನ್ನು ಕೀರ್ತಿಲಾ ನಾಗೇಶ್ ಪೂಜಾರಿ (3) ಎಂದು ಗುರುತಿಸಲಾಗಿದೆ.
ಘಟನೆಯಲ್ಲಿ ಮತ್ತೋರ್ವ ಬಾಲಕಿ ಗಾಯಗೊಂಡಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.