ಚಿಕ್ಕಮಗಳೂರು : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಸುಪಾರಿ ಕೊಟ್ಟು ಪತಿಯನ್ನೇ ಪತ್ನಿ ಹತ್ಯೆ ಮಾಡಿಸಿರುವ ಘಟನೆ ನಡೆದಿದೆ.
ಹೌದು, ಸುಪಾರಿ ಕೊಟ್ಟು ಪತಿಯನ್ನೇ ಹತ್ಯೆ ಮಾಡಿಸಿದ ಘಟನೆ ಚಿಕ್ಕಮಗಳೂರಿನ ಎನ್ ಆರ್ ಪುರ ತಾಲೂಕಿನ ಕರಗುಂದ ಬಳಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಎನ್ ಆರ್ ಪುರ ಪಟ್ಟಣದ ಸುದರ್ಶನ್ ಎಂದು ಗುರುತಿಸಲಾಗಿದೆ.
10 ವರ್ಷಗಳ ಹಿಂದೆ ಕಮಲ ಸುದರ್ಶನ್ ರನ್ನು ಪ್ರೀತಿಸಿ ಮದುವೆಯಾಗಿದ್ದರು. ಆದರೆ ಕಮಲಾ ಶಿವರಾಜ್ ಜೊತೆ ಅನೈತಿಕ ಸಂಬಂಧ ಹೊಂದಿದ್ದಳು. ನಂತರ ಅನೈತಿಕ ಸಂಬಂಧಕ್ಕೆ ಅಡ್ಡಿಯಾದ ಸುದರ್ಶನ್ ಗೆ ನಿದ್ರೆ ಮಾತ್ರೆ ನೀಡಿ ಕುತ್ತಿಗೆ ಹಿಸುಕಿ ಕೊಲೆ ಮಾಡಿದ್ದಾರೆ.
ಸದ್ಯ ಸುದರ್ಶನ್ ಪತ್ನಿ ಕಮಲ, ಆಕೆಯ ಪ್ರಿಯಕರ ಎಸ್ ಶಿವರಾಜ್ ಹಾಗೂ ಆತನ ಇನ್ನಿಬ್ಬರು ಸ್ನೇಹಿತರನ್ನು ಪೊಲೀಸರು ಬಂಧಿಸಿದ್ದಾರೆ.