ಬಳ್ಳಾರಿ : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಳ್ಳಾರಿ ಜಿಲ್ಲೆಯಲ್ಲಿ ನಡೆದಿದೆ.
ಮೈನಿಂಗ್ ಸಾಗಿಸುತ್ತಿದ್ದ ಟಿಪ್ಪರ್ ಗೆ ಲಾರಿ ಡಿಕ್ಕಿಯಾಗಿ ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದಾರೆ. ಸಂಡೂರಿನ ಜೈ ಸಿಂಗಪುರ ಬಳಿ ಈ ಅಪಘಾತ ಸಂಭವಿಸಿದೆ. ಇಬ್ಬರು ಮಕ್ಕಳು ಸೇರಿದಂತೆ ಒಟ್ಟು ನಾಲ್ವರು ಸಾವನ್ನಪ್ಪಿದ್ದಾರೆ.
ಅಪಘಾತದಲ್ಲಿ ಮತ್ತೋರ್ವ ವ್ಯಕ್ತಿಗೆ ಗಂಭೀರ ಗಾಯಗಳಾಗಿದ್ದು, ಕೊಪ್ಪಳ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಸಂಡೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.