ಮೈಸೂರು : ಮೈಸೂರಿನಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು, ಮೇಕೆ ಮೇಯಿಸುತ್ತಿದ್ದಾಗ ಹುಲಿ ದಾಳಿ ಮಾಡಿದ್ದು ಯುವಕ ಸಾವನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಗುರುಪುರ ಎಂಬ ಗ್ರಾಮದಲ್ಲಿ ನಡೆದಿದೆ.
ಹುಲಿ ದಾಳಿಯಿಂದ ಹರೀಶ್ (28) ಎನ್ನುವ ಯುವಕ ಗಂಭೀರವಾಗಿ ಗಾಯಗೊಂಡಿದ್ದ. ತಕ್ಷಣ ಹರೀಶ್ ನನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಮಾರ್ಗ ಮಧ್ಯೆ ಹರೀಶ್ ಸಾವನಪ್ಪಿದ್ದಾನೆ. ಮೈಸೂರು ಜಿಲ್ಲೆಯ ನಾಗಪುರದ 5ನೇ ಬ್ಲಾಕ್ ನಲ್ಲಿ ಈ ಒಂದು ಘಟನೆ ನಡೆದಿದೆ.