ಕಲಬುರ್ಗಿ : ಕಲಬುರಗಿ ಜಿಲ್ಲಾಧಿಕಾರಿಗಳ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆ ಕಲ್ಬುರ್ಗಿಯ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಬಿಜೆಪಿ ಬಿಜೆಪಿ ಎಂಎಲ್ಸಿ ಎನ್. ರವಿಕುಮಾರ್ ವಿರುದ್ಧ FIR ದಾಖಲಾಗಿದೆ. ಶರಣ ಸಿರಸಗಿ ನಿವಾಸಿ ದತ್ತಾತ್ರೇಯ ಇಲ್ಕಳಕಿ ಅವರ ದೂರಿನ ಮೇರೆಗೆ ಸ್ಟೇಶನ್ ಬಜಾರ್ ಪೊಲೀಸರು ಎನ್.ರವಿಕುಮಾರ್ ವಿರುದ್ಧ ಪ್ರಕರಣ ದಾಖಲಾಗಿದೆ.
ಸರ್ಕಾರಿ ಅಧಿಕಾರಿಗಳ ನಿಂದನೆ, ಎಸ್ ಸಿ ಸಮುದಾಯದ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದು, ಮೇ 24ರಂದು ಬಿಜೆಪಿ ಪ್ರತಿಭಟನೆಯಲ್ಲಿ ರವಿಕುಮಾರ್ ಈ ಒಂದು ಹೇಳಿಕೆ ನೀಡಿದ್ದರು. ಡಿಸಿ ಫೌಜಿಯಾ ತರುನ್ನಮ್ ಕುರಿತಂತೆ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಸಿಪಿಐ ಚಂದ್ರಶೇಖರ್, ಡಿವೈಎಸ್ಪಿ ಶಂಕರ್ ಗೌಡ ಪಾಟೀಲ್ ವಿರುದ್ಧ ನಿಂದನೆ ಆರೋಪದ ಅಡಿ ದೂರು ನೀಡಿದ್ದಾರೆ.
ಎಸ್ ಸಿ ಸಮುದಾಯಕ್ಕೆ ಅವಹೇಳನ ಮಾಡಿದ್ದಾರೆ ಎಂದು ದೂರು ನೀಡಿದ್ದಾರೆ . ಹಾಗಾಗಿ ಬಿಜೆಪಿ ಎಂಎಲ್ಸಿ ಎನ್.ರವಿಕುಮಾರ್ ವಿರುದ್ಧ ಶರಣ ಸಿರಸಗಿ ನಿವಾಸಿ ದತ್ತಾತ್ರೇಯ ಇಲ್ಕಳಕಿ ಅವರ ದೂರಿನ ಮೇರೆಗೆ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ರವಿಕುಮಾರ್ ವಿರುದ್ಧ FIR ದಾಖಲಾಗಿದೆ.
ಜಿಲ್ಲಾಧಿಕಾರಿ ಫೌಝಿಯಾ ತರನ್ನುಮ್ ಅವರು ಪಾಕಿಸ್ತಾನದಿಂದ ಬಂದಿದ್ದಾರೋ ಅಥವಾ ಇಲ್ಲಿ ಐಎಎಸ್ ಆಫೀಸರ್ ಆಗಿದ್ದಾರೋ ಗೊತ್ತಿಲ್ಲ ನನಗೆ. ಬಹುಶಃ ನಿಮ್ಮ ಚಪ್ಪಾಳೆ ನೋಡಿದರೆ ಡಿಸಿ ಅವರು ಪಾಕಿಸ್ತಾನದಿಂದ ಬಂದಿರುವಂತೆ ಕಾಣಿಸುತ್ತದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ಈಗ ಎನ್.ರವಿಕುಮಾರ್ ವಿರುದ್ಧ ಪ್ರಕರಣ ದಾಖಲಾಗಿದೆ.