ಬೆಂಗಳೂರು : ಕೇಂದ್ರದಿಂದ ಮಾರ್ಗಸೂಚಿ ಬಂದ ಬಳಿಕ ಕೋವಿಡ್ ಲಸಿಕೆ ನೀಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ಬಳಿಕ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ ನೀಡಿದರು. ಕೊರೊನ ನಿಯಂತ್ರಣ ಸಂಬಂಧ ಇಂದು ಸಿಎಂ ಸಿದ್ದರಾಮಯ್ಯ ಅವರ ಕಾವೇರಿ ನಿವಾಸದಲ್ಲಿ ಸಭೆ ನಡೆಯಿತು.
ಸಭೆ ಬಳಿಕ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್ ಕೇಂದ್ರ ಸರ್ಕಾರದ ಅಭಿಪ್ರಾಯ ಪಡೆದು ವ್ಯಾಕ್ಸಿನ ನೀಡಲಾಗುತ್ತದೆ. ಕೋವಿಡ್ ಲಕ್ಷಣ ಇರುವ ಮಕ್ಕಳಿಗೆ ರಜೆ ನೀಡಲು ಸೂಚನೆ ನೀಡಲಾಗಿದೆ. ಶಾಲೆಯ ಆಡಳಿತ ಮಂಡಳಿ ಕೂಡ ಈ ಕುರಿತು ಗಮನ ಹರಿಸಬೇಕು. ಟೆಸ್ಟಿಂಗ್ ವಿಚಾರದಲ್ಲಿ ಹಳೆಯ ಪದ್ಧತಿ ಅನುಸರಿಸುತ್ತೇವೆ. ಅಗತ್ಯವಿರುವ ಎಲ್ಲ ಕ್ರಮಗಳನ್ನು ನಾವು ತೆಗೆದುಕೊಳ್ಳುತ್ತೇವೆ. ವ್ಯಾಕ್ಸಿನ್ ಕೊಡುವ ಬಗ್ಗೆ ಸಿಎಂ ಸಿದ್ದರಾಮಯ್ಯ ಕೇಂದ್ರದ ಅಭಿಪ್ರಾಯ ಪಡೆದು ವರದಿ ನೀಡಲು ತಿಳಿಸಿದ್ದಾರೆ.
ವೈದ್ಯರು ಸಿಬ್ಬಂದಿಗೂ ರಜೆ ಮೇಲೆ ಹೋಗದಂತೆ ಸೂಚನೆ ನೀಡಿದ್ದಾರೆ. ಎಲ್ಲರಿಗೂ ಕೋವಿಡ್ ಟೆಸ್ಟ್ ಮಾಡುವ ಅಗತ್ಯವಿಲ್ಲ. ಸೋಂಕಿನ ಲಕ್ಷಣ ಇರುವವರೆಗೆ ಮಾತ್ರ ಟೆಸ್ಟ್ ಮಾಡುತ್ತೇವೆ. ವಿದೇಶದಿಂದ ಬಂದವರಿಗೆ ಯಾವುದೇ ಟೆಸ್ಟಿಂಗ್ ಇರಲ್ಲ. ಕೋವಿಡ ನಿಯಂತ್ರಣಕ್ಕೆ ನಾವು ತಯಾರಾಗಿದ್ದೇವೆ. ಬಾಣಂತಿಯರು, ಮಕ್ಕಳು, 50 ವರ್ಷ ಮೇಲ್ಪಟ್ಟವರು ವಿವಿಧ ಕಾಯಿಲೆ ಇರುವವರು ಮಾಸ್ಕ್ ಧರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಮಯ ಬಳಿಕ ದಿನೇಶ್ ಗುಂಡೂರಾವ್ ಹೇಳಿಕೆ ನೀಡಿದರು.