ಹಾಸನ : ಹಾಸನ ಜಿಲ್ಲೆಯಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಇದೀಗ ಮಳೆಯಿಂದ ಕಾರು ಪಲ್ಟಿಯಾಗಿ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬಾಗೇ ಗ್ರಾಮದ ಬಳಿ ಈ ಒಂದು ಭೀಕರ ಅಅಪಘಾತ ಸಂಭವಿಸಿದೆ.
ಮೃತ ಯುವಕರನ್ನು ಬೆಂಗಳೂರು ಮೂಲದ ಅಭಿಷೇಕ್ (27) ಹಾಗು ಶರತ್ (28) ಎಂದು ತಿಳಿದುಬಂದಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬಾಗೇ ಗ್ರಾಮದ ಬಳಿ ಈ ಒಂದು ಭೀಕರ ಅಪಘಾತ ಸಂಭವಿಸಿದೆ. KA 03 AK 5325 ಸಂಖ್ಯೆಯ ಎರ್ಟಿಗಾ ಕಾರಿನಲ್ಲಿ ನಾಲ್ವರು ಯುವಕರು ತೆರಳುತ್ತಿದ್ದರು.
ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದಾಗ ಈ ಒಂದು ಅಪಘಾತ ಸಂಭವಿಸಿದೆ. ಮಳೆಯಿಂದ ರಸ್ತೆ ಕಾಣದೆ ರಸ್ತೆ ಬದಿಯ ಕಬ್ಬಿಣದ ಡಿವೈಡರ್ಗೆ ಕಾರುಡಿಕ್ಕಿ ಹೊಡೆದಿದೆ. ಸದ್ಯ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.