ಬೆಂಗಳೂರು: ರಾಜ್ಯದಲ್ಲಿ ಮಹಾಮಳೆಗೆ ಇಂದು ಮತ್ತೆ ಮೂವರು ಬಲಿಯಾಗಿದ್ದಾರೆ. ಹಾಸನದಲ್ಲಿ ಭಾರೀ ಮಳೆಯಿಂದಾಗಿ ಚಾಲಕನಿಗೆ ರಸ್ತೆ ಕಾಣದೇ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಹಾಸನ ತಾಲೂಕಿನ ಬಾಗೇ ಸಮೀಪ ಅರಸು ನಗರದಲ್ಲಿ ಮಳೆಯ ಕಾರಣ ಚಾಲಕನಿಗೆ ರಸ್ತೆ ಕಾಣದೆ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದ್ದು ಇಬ್ಬರು ಮೃತಪಟ್ಟಿದ್ದಾರೆ. ಮತ್ತಿಬ್ಬರು ಗಾಯಗೊಂಡಿದ್ದಾರೆ. ಬೆಂಗಳೂರಿನ ದಾಸರಹಳ್ಳಿ ಮೂಲದ ಶರತ್(28), ಅಭಿಷೇಕ್(27) ಮೃತಪಟ್ಟವರು ಎಂದು ಗುರುತಿಸಲಾಗಿದೆ.
ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಮಾಲ್ದಾರೆಯಲ್ಲಿ ಮನೆ ಬಳಿ ಕೆಲಸ ಮಾಡುತ್ತಿದ್ದಾಗ ಮರದ ಕೊಂಬೆ ಬಿದ್ದು ಗಾಯಗೊಂಡಿದ್ದ ವಿಷ್ಣು ಬೆಳ್ಯಪ್ಪ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.