ದಕ್ಷಿಣಕನ್ನಡ : ಕಳೆದ ಕೆಲವು ದಿನಗಳ ಹಿಂದೆ ಮಂಗಳೂರಿನಲ್ಲಿ ರೌಡಿಶೀಟರ್ ಹಾಗೂ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಲಾಗಿತ್ತು. ಇದೀಗ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೋರ್ವ ಯುವಕನ ಹತ್ಯೆಗೆ ಯತ್ನ ನಡೆದಿರುವ ಘಟನೆ ವರದಿಯಾಗಿದೆ.
ಹೌದು ದಕ್ಷಿಣ ಕನ್ನಡದಲ್ಲಿ ಯುವಕನನ್ನು ಹತ್ಯೆಗೈಯಲು ಯತ್ನಿಸಿರುವ ಘಟನೆ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಯುವಕನೊಬ್ಬನನ್ನು ಹತ್ಯೆಗೆ ಯತ್ನಿಸಲಾಗಿದೆ. ಪಿಕಪ್ ವಾಹನದ ಚಾಲಕನ ಮೇಲೆ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಲಾಗಿದೆ. ಕಾಂಬೋಡಿಯ ಇರಾಕೋಡಿ ಬಳಿ ವಾಹನ ಚಾಲಕ ಹನೀಫ್ ಮೇಲೆ ಹಲ್ಲೆ ನಡೆಸಲಾಗಿದೆ. ಹನೀಫ್ ಮೇಲೆ ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದಾರೆ. ಕೊಳತ್ತಮಜಲು ನಿವಾಸಿ ಹನೀಫ್ ಹತ್ಯೆಗೆ ದುಷ್ಕರ್ಮಿಗಳು ಯತ್ನಿಸಿದ್ದಾರೆ.
ಚಾಲಕ ಹನೀಫ್ ಮರಳು ಅನ್ಲೋಡ್ ಮಾಡುತ್ತಿದ್ದಾಗ ದಾಳಿ ಮಾಡಿದ್ದಾರೆ ಬೈಕ್ ನಲ್ಲಿ ಬಂದಿದ್ದ ಇಬ್ಬರಿಂದ ತಲ್ವಾರ್ ನಿಂದ ಹನೀಫ್ ಮೇಲೆ ದಾಳಿ ನಡೆದಿದೆ. ಹನೀಫ್ ಜೊತೆಗಿದ್ದ ರಹಿಮ್ ಮೇಲು ಹಳೆ ನಡೆದಿದೆ. ಸದ್ಯ ಘಟನಾ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಠಾಣೆಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.








