ಬೆಂಗಳೂರು: 2025-26ನೇ ಸಾಲಿಗೆ ಮೆಟ್ರಿಕ್ ನಂತ್ರದ ವಿದ್ಯಾರ್ಥಿನಿಲಯಗಳಿಗೆ ಅಂದರೆ ಪಿಯುಸಿ, ಐಟಿಐ ಮತ್ತು ಡಿಪ್ಲೋಮಾ ವಿದ್ಯಾರ್ಥಿಗಳಿಗೆ ಹೊಸದಾಗಿ ಪ್ರವೇಶ ಬಯಸುವವರಿಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಈ ಸಂಬಂಧ ರಾಜ್ಯದ ಎಲ್ಲಾ ಜಿಲ್ಲೆಗಳ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳಿಗೆ ಆಯುಕ್ತರು ಪತ್ರ ಬರೆದಿದ್ದು, 2025-26ನೇ ಸಾಲಿಗೆ ಮೆಟ್ರಿಕ್ ನಂತ್ರದ ವಿದ್ಯಾರ್ಥಿನಿಲಯಗಳಲ್ಲಿ ಹೊಸದಾಗಿ ಪ್ರವೇಶ ಬಯಸುವ ಪಿಯುಸಿ, ಐಟಿಐ ಮತ್ತು ಡಿಪ್ಲೋಮಾ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಕಲ್ಪಿಸಲು ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ತಿಳಿಸಿದ್ದಾರೆ.
ಹೊಸ ವಿದ್ಯಾರ್ಥಿಗಳು ಅರ್ಜಿ ಸಲ್ಲಿಕೆಯು ದಿನಾಂಕ 20-05-2025ರಿಂದ ಆರಂಭಗೊಂಡಿದೆ. ಕೊನೆಯ ದಿನಾಂಕ 20-06-2025 ಆಗಿದೆ. ಹೊಸ ಅರ್ಜಿಗಳನ್ನು ತಾಲ್ಲೂಕು ಕಲ್ಯಾಣ ಅಧಿಕಾರಿಗಳು ಪರಿಶೀಲನೆ ಮಾಡಲು ಅಂತಿಮ ದಿನಾಂಕ 23-06-2025 ಆಗಿರುತ್ತದೆ ಎಂದಿದ್ದಾರೆ.
ತಾಲ್ಲೂಕು ಸಮಿತಿಯ ಮೂಲಕ ಆಯ್ಕೆಯಾದ ಹೊಸ ವಿದ್ಯಾರ್ಥಿಗಳ ಆಯ್ಕೆ ಪಟ್ಟಿಯನ್ನು ದಿನಾಂಕ 27-06-2025ರಂದು ಪ್ರಕಟಿಸಲಾಗುತ್ತದೆ. ಆಯ್ಕೆಯಾದ ವಿದ್ಯಾರ್ಥಿಗಳು ವಿದ್ಯಾರ್ಥಿನಿಲಯಗಳಿಗೆ ಪ್ರವೇಶ ಪಡೆಯಲು ಅಂತಿಮ ದಿನಾಂಕ 30-06-2025 ಆಗಿರುತ್ತದೆ ಎಂದು ತಿಳಿಸಿದೆ.
BIG NEWS : ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಉಚ್ಚಾಟನೆ ಮಾಡಲಾಗಿದೆ : ಬಿವೈ ವಿಜಯೇಂದ್ರ ಫಸ್ಟ್ ರಿಯಾಕ್ಷನ್
BREAKING: ಮರ ಬಿದ್ದು ಸೊರಬ-ಸಾಗರ ರಸ್ತೆ ಸಂಚಾರ ಬಂದ್: ಎಚ್ಚೆತ್ತುಕೊಳ್ಳದ ಅರಣ್ಯ ಇಲಾಖೆ