ಬೆಂಗಳೂರು: ರಾಜ್ಯದಲ್ಲಿ ಕೊರೋನಾ ( Corona ) ಪ್ರಕರಣಗಳ ಸಂಖ್ಯೆ ಶತಕ ತಲುಪಿದೆ. ಇಂದು 36 ಜನರಿಗೆ ಕೋವಿಡ್ ಪಾಸಿಟಿವ್ ( Covid19 Positive ) ಎಂಬುದಾಗಿ ದೃಢಪಡುವ ಮೂಲಕ ಸಕ್ರೀಯ ಪ್ರಕರಣಗಳ ಸಂಖ್ಯೆ 100ಕ್ಕೆ ಏರಿಕೆಯಾಗಿದೆ.
ಈ ಬಗ್ಗೆ ರಾಜ್ಯ ಆರೋಗ್ಯ ಇಲಾಖೆಯಿಂದ ಕೋವಿಡ್ ಬುಲೆಟಿನ್ ಬಿಡುಗಡೆ ಮಾಡಿದ್ದು, ರಾಜ್ಯದಲ್ಲಿ ಇಂದು ಆರ್ ಟಿ ಪಿಸಿಆರ್ ಮೂಲಕ 361, ರಾಟ್ ಮೂಲಕ 20 ಜನರು ಸೇರಿದಂತೆ 381 ಮಂದಿಯನ್ನು ಕೋವಿಡ್ ಪರೀಕ್ಷೆಗೆ ( Covid Test ) ಒಳಪಡಿಸಲಾಯಿತು. ಇವರಲ್ಲಿ 36 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಹೀಗಾಗಿ ಸೋಂಕಿತರ ಸಂಖ್ಯೆ 100ಕ್ಕೆ ಏರಿಕೆಯಾಗಿದೆ ಎಂಬುದಾಗಿ ಹೇಳಿದೆ.
ಸದ್ಯ ರಾಜ್ಯದಲ್ಲಿ ನಾಲ್ವರು ಆಸ್ಪತ್ರೆಯ ಜನರಲ್ ವಾರ್ಡ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನುಳಿದವರಿಗೆ ಹೋಂ ಐಸೋಲೇಷನ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂಬುದಾಗಿ ತಿಳಿಸಿದೆ.
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಪ್ರಕರಣಗಳ ( Corona Case ) ಸಂಖ್ಯೆ ಹೆಚ್ಚಳವಾಗುತ್ತಿದೆ. ಹೀಗಾಗಿ ಮಾಸ್ಕ್ ಧರಿಸುವಂತೆ ಆರೋಗ್ಯ ಇಲಾಖೆ ಸಾರ್ವಜನಿಕರಿಗೆ ಮನವಿ ಮಾಡಿದೆ. ಇದರ ನಡುವೆ ಕೋವಿಡ್ ಬಗ್ಗೆ ಯಾವುದೇ ಆತಂಕ ಪಡುವಂತ ಪರಿಸ್ಥಿತಿ ಕರ್ನಾಟಕದಲ್ಲಿ ಇಲ್ಲ ಎಂಬುದಾಗಿಯೂ ಹೇಳಿದೆ.