ಬಳ್ಳಾರಿ : ಧಾರವಾಡ ಶಹರದ ಸಪ್ತಾಪೂರ ರಸ್ತೆಯಲ್ಲಿರುವ ಮಿಲಿಟರಿ ಬಾಲಕಿಯರ ವಸತಿ ನಿಲಯದಲ್ಲಿ 2025-26ನೇ ಶೈಕ್ಷಣಿಕ ವರ್ಷಕ್ಕಾಗಿ ಬಳ್ಳಾರಿ ಜಿಲ್ಲೆಯ ಗ್ರಾಮಾಂತರ ಪ್ರದೇಶ ಹಾಗೂ ರಾಜ್ಯದ ಇತರ ಜಿಲ್ಲೆಗಳಲ್ಲಿರುವ ಯುದ್ದದಲ್ಲಿ ಮಡಿದ ಯೋಧರ ಮತ್ತು ಮಾಜಿ ಸೈನಿಕರ ಹೆಣ್ಣು ಮಕ್ಕಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಬಾಲಕಿಯರ ವಿದ್ಯಾರ್ಥಿನಿಲಯದಲ್ಲಿ 5 ನೇ ತರಗತಿಯಿಂದ ಪಿಯುಸಿ – 2 ರ ವಿದ್ಯಾರ್ಥಿಗಳಿಗೆ ಪ್ರವೇಶ ನೀಡಲಾಗುತ್ತದೆ. ವಸತಿ ನಿಲಯದಲ್ಲಿ ವಾಸ್ತವ್ಯ ಮತ್ತು ಊಟೋಪಚಾರಗಳು ಉಚಿತವಾಗಿದ್ದು, ಮಾಜಿ ಸೈನಿಕರ ಹೆಣ್ಣು ಮಕ್ಕಳು ಈ ಸೌಲಭ್ಯದ ಉಪಯೋಗ ಪಡೆಯಬಹುದಾಗಿದೆ.
ವಸತಿ ನಿಲಯದಲ್ಲಿ ಧಾರವಾಡ ನಗರದಲ್ಲಿರುವ ವಿದ್ಯಾ ಸಂಸ್ಥೆಗಳಲ್ಲಿ ಪ್ರವೇಶ ಪಡೆದ ವಿದ್ಯಾರ್ಥಿನಿಯರಿಗೆ ಮಾತ್ರ ನಿಲಯದಲ್ಲಿ ಪ್ರವೇಶ ನೀಡಲಾಗುವುದು. ಅರ್ಜಿಗಳನ್ನು ಜಂಟಿ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಉದಯ ಹಾಸ್ಟೆಲ್ ಸರ್ಕಲ್ ಸೈನಿಕ ವಿಶ್ರಾಂತಿ ಗೃಹ ಆವರಣ, ಧಾರವಾಡ ಇಲ್ಲಿ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ಮೇ 31 ರೊಳಗಾಗಿ ಮರಳಿ ಇದೇ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಅಥವಾ ದೂ.0836-2440176 ಗೆ ಸಂಪರ್ಕಿಸಬಹುದು ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.