ಮಂಗಳೂರು: ಜಿಲ್ಲೆಯ ಕದ್ರಿ ಠಾಣೆಯ ಪೊಲೀಸರು ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ನನ್ನು ಬಂಧಿಸಿದ್ದಾರೆ.
ಮಂಗಳೂರಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ಬಂದ್ ಗೆ ಕರೆ ನೀಡಲಾಗಿತ್ತು. ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕದ್ರಿ ಠಾಣೆಯ ಪೊಲೀಸರು ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ನನ್ನು ಅರೆಸ್ಟ್ ಮಾಡಿದ್ದಾರೆ.
ಅಂದಹಾಗೇ ಶರಣ್ ಪಂಪ್ ವೆಲ್ ವಿರುದ್ಧ ಕದ್ರಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಈ ಹಿನ್ನಲೆಯಲ್ಲಿ ಅವರನ್ನು ಬಂಧಿಸಲಾಗಿದೆ. ಶರಣ್ ಪಂಪ್ ವೆಲ್ ಬಂಧನದ ವಿಷಯ ತಿಳಿದಂತ ಹಿಂದೂ ಸಂಘಟನೆಯ ಕಾರ್ಯಕರ್ತರು, ಕದ್ರಿ ಠಾಣೆಯ ಮುಂದೆ ಜಮಾಯಿಸಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣದಿಂದ ಕೂಡಿದೆ.
BIG NEWS : ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಉಚ್ಚಾಟನೆ ಮಾಡಲಾಗಿದೆ : ಬಿವೈ ವಿಜಯೇಂದ್ರ ಫಸ್ಟ್ ರಿಯಾಕ್ಷನ್