ಬೆಂಗಳೂರು : ಪಹಲ್ಗಾಮ್ ದಾಳಿಯ ಪ್ರತೀಕಾರವಾಗಿ ಭಾರತವು ಪಾಕಿಸ್ತಾನದ ಮೇಲೆ ಆಪರೇಷನ್ ಸಿಂಧೂರ್ ಹೆಸರಿನಲ್ಲಿ ದಾಳಿ ನಡೆಸಿ, ಪಾಕಿಸ್ತಾನದಲ್ಲಿರುವ ಉಗ್ರರ ನೆಲೆಗಳನ್ನು ಧ್ವಂಸಗೊಳಿಸಿದ್ದು ಅಲ್ಲದೆ ಈ ಒಂದು ದಾಳಿಯಲ್ಲಿ ನೂರಕ್ಕೂ ಹೆಚ್ಚು ಉಗ್ರರನ್ನು ಹತ್ಯೆಗೈದಿದೆ. ಈ ನೆಲೆಯಲ್ಲಿ ಇಂದು ಕಾಂಗ್ರೆಸ್ ಪಕ್ಷವು ಬೆಂಗಳೂರಿನ ಟೌನ್ ಹಾಲ್ ನಲ್ಲಿ ಸೈನಿಕರಿಗೆ ಗೌರವ ಸೂಚಿಸಲು ಜೈ ಹಿಂದ್ ಕಾರ್ಯಕ್ರಮ ಆಯೋಜನೆ ಮಾಡಿದೆ.
ಹೌದು ಆಪರೇಷನ್ ಸಿಂಧೂರ್ ಯಶಸ್ವಿ ಹಿನ್ನೆಲೆಯಲ್ಲಿ ಜೈ ಹಿಂದ್ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು, ಸೈನಿಕರಿಗೆ ಧನ್ಯವಾದ ಅರ್ಪಿಸಲು ಇಂದು ಜೈ ಹಿಂದ್ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಬೆಂಗಳೂರಿನ ಟೌನ್ ಹಾಲ್ ನಲ್ಲಿ ಈ ಒಂದು ಜೈಹಿಂದ್ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೆವಾಲ, ಸಚಿವರು, ಶಾಸಕರು ಸೇರಿದಂತೆ ಪ್ರಮುಖರು ಈ ಒಂದು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.