Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕೇಳಿಸದ ಕಿವಿಗೆ ‘ಟೀಮ್ ಈಶ್ವರ್ ಮಲ್ಪೆ’ ಆಸರೆ: ಮೇ.12ರಂದು ಸಾಗರದಲ್ಲಿ ಉಚಿತ ಶ್ರವಣ ತಪಾಸಣಾ ಶಿಬಿರ!

29/04/2026 9:47 PM

BREAKING: ಬೆಂಗಳೂರಲ್ಲಿ ರಣ ಮಳೆಗೆ ಮತ್ತೊಂದು ಬಲಿ: ಕರೆಂಟ್ ಶಾಕ್ ಹೊಡೆದು ವಿದ್ಯಾರ್ಥಿ ಸಾವು

29/04/2026 9:23 PM

‘ದಿಗ್ಬಂಧನ ವಿಸ್ತರಣೆಗೂ ಮುನ್ನ ಒಪ್ಪಂದಕ್ಕೆ ಸಹಿ ಹಾಕಿ’: ಇರಾನ್‌ಗೆ ಡೊನಾಲ್ಡ್ ಟ್ರಂಪ್ ಖಡಕ್ ಎಚ್ಚರಿಕೆ!

29/04/2026 9:08 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಪೌರ ನೌಕರರ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಮದ್ದೂರು ಪುರಸಭೆ ಅಧ್ಯಕ್ಷೆ ಕೋಕಿಲ ಅರುಣ್ ಬೆಂಬಲ
KARNATAKA

ಪೌರ ನೌಕರರ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಮದ್ದೂರು ಪುರಸಭೆ ಅಧ್ಯಕ್ಷೆ ಕೋಕಿಲ ಅರುಣ್ ಬೆಂಬಲ

By kannadanewsnow0928/05/2025 3:28 PM

ಮಂಡ್ಯ : ಪೌರನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ಪೌರ ನೌಕರರ ಸಂಘವು ರಾಜ್ಯಾದ್ಯಂತ ಅನಿರ್ಧಿಷ್ಟಾವಧಿ ಮುಷ್ಕರವನ್ನು ಹಮ್ಮಿಕೊಂಡಿದ್ದು, ಎರಡನೇ ದಿನವು ಮದ್ದೂರು ಪುರಸಭೆ ಕಛೇರಿ ಮುಂಭಾಗ ಮುಷ್ಕರ ಮುಂದುವರೆದಿದೆ.

ಮದ್ದೂರು ಪುರಸಭೆ ಎದುರು ಪೌರ ನೌಕರರು ನಡೆಸುತ್ತಿರುವ ಪ್ರತಿಭಟನೆಯಲ್ಲಿ ಎರಡನೇ ದಿನದಂದು ಪುರಸಭೆ ಅಧ್ಯಕ್ಷೆ ಕೋಕಿಲ ಅರುಣ್ ಕುಮಾರ್ ಭಾಗವಹಿಸಿ ಬೆಂಬಲ ವ್ಯಕ್ತಪಡಿಸಿದರು.

ಎರಡನೇ ದಿನವು ಪುರಸಭೆಯ ನೌಕರರು ಕೆಲಸಕ್ಕೆ ಹಾಜರಾಗದ ಹಿನ್ನೆಲೆಯಲ್ಲಿ ಯಾವುದೇ ಕೆಲಸ ಕಾರ್ಯಗಳನ್ನು ಮಾಡಲಿಲ್ಲ. ನೌಕರರು ಪ್ರತಿಭಟನೆಯಲ್ಲಿ ಭಾಗಿಯಾಗಿರುವುದನ್ನು ನೋಡಿ ಸಾರ್ವಜನಿಕರು ವಾಪಸ್‌ ಹೋಗುತ್ತಿದ್ದರು.

ಪ್ರತಿಭಟನೆಯ ನೇತೃತ್ವ ವಹಿಸಿದ್ದ ಅಧ್ಯಕ್ಷ ಶ್ರೀನಿವಾಸ್ ಮಾತನಾಡಿ, ರಾಜ್ಯದ ಸ್ಥಳೀಯ ಸಂಸ್ಥೆಗಳಾದ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳ ಪೌರ ನೌಕರರನ್ನು ರಾಜ್ಯ ಸರ್ಕಾರಿ ನೌಕರರೆಂದು ಪರಿಗಣಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಗುತ್ತಿದೆ.

ಪೌರ ನೌಕರರ ಸಂಘದ ಕಾರ್ಯಕಾರಿಣಿ ಸಭೆಯಲ್ಲಿ ಹಲವು ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ನಿರ್ಣಯಗಳನ್ನು ಕೈಗೊಂಡು ಸರ್ಕಾರಕ್ಕೆ ಸಲ್ಲಿಸಲಾಗಿತ್ತು. ಮನವಿ ಸಲ್ಲಿಸಿ 45 ದಿನಗಳಾದರೂ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಹೀಗಾಗಿ ಪ್ರತಿಭಟನೆಯು ಅನಿವಾರ್ಯವಾಗಿದೆ ಎಂದು ಕಿಡಿಕಾರಿದರು.

* ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆ ನೌಕರರನ್ನು ರಾಜ್ಯ ಸರ್ಕಾರಿ ನೌಕರರೆಂದು ಪರಿಗಣಿಸಿ ಜ್ಯೋತಿ ಸಂಜೀವಿನಿ, ಕೆಜಿಐಡಿ, ಸೇರಿದಂತೆ ಸರ್ಕಾರಿ ನೌಕರಿ ಪಡೆಯುವ ಎಲ್ಲಾ ಸೌಲಭ್ಯಗಳನ್ನು ನೀಡಬೇಕು.

* ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹೊರಗುತ್ತಿಗೆ ಅಡಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ನೀರು ಸರಬರಾಜು, ಚಾಲಕರು, ಲೋಡರ್ಸ್, ಕ್ಲೀನರ್ಸ್, ಗಾರ್ಡ್ನರ್, ಸ್ಯಾನಿಟರಿ ಸೂಪರವೈಸರ್, ಯುಜಿಡಿ ಸಹಾಯಕರು, ಸೇರಿದಂತೆ ವಿವಿಧ ವೃಂದದ ಹೊರಗುತ್ತಿಗೆ ನೌಕರರನ್ನು ನೇರ ಪಾವತಿಗೆ ಒಳಪಡಿಸುವುದು.

* ದಿನಗೂಲಿ ಕ್ಷೇಮಾಭಿವೃದ್ಧಿ ಸಮಾನ ಕೆಲಸಕ್ಕೆ ಸಮಾನ ವೇತನ ನೌಕರರನ್ನು ಖಾಯಂ ಮಾಡುವುದು.

* ಎಲ್ಲಾ ನೌಕರರಿಗೆ ಎಸ್ ಎಫ್ ಸಿ ಮುಕ್ತ ನಿಧಿಯಿಂದ ವೇತನ ನೀಡುವುದು.

* ಈ ಎಲ್ಲಾ ಬೇಡಿಕೆಗಳನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಬೇಕು. ಇಲ್ಲವಾದರೆ ಅನಿರ್ಧಿಷ್ಟಾವಧಿ ಮುಷ್ಕರ ಮಾಡುವ ಮೂಲಕ ಕಚೇರಿಗಾಗಲೀ ಅಥವಾ ಸ್ವಚ್ಛತೆಗಾಗಲಿ ಹೋಗುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಪುರಸಭೆ ಅಧ್ಯಕ್ಷೆ ಕೋಕಿಲ ಅರುಣ್ ಕುಮಾರ್ ಪ್ರತಿಭಟನಾ ನಿರತರೊಂದಿಗೆ ಮಾತನಾಡಿ, ಕಳೆದೆರಡು ದಿನಗಳಿಂದ ಪಟ್ಟಣದಾದ್ಯಂತ ಪೌರ ನೌಕರರ ಪ್ರತಿಭಟನೆಯಿಂದ ಸಾರ್ವಜನಿಕರಿಗೆ ತೀವ್ರ ಸಮಸ್ಯೆ ಉಂಟಾಗಿದೆ. ಹೀಗಾಗಿ ರಾಜ್ಯ ಸರ್ಕಾರವು ಪೌರ ನೌಕರರ ಬೇಡಿಕೆಗಳನ್ನು ಆದಷ್ಟು ಬೇಗ ಈಡೇರಿಸಬೇಕು ಹಾಗೂ ಈ ಸಂಬಂಧ ಸರ್ಕಾರದ ಗಮನಕ್ಕೆ ತರಲಾಗುವುದು ಎಂದು ಭರವಸೆ ನೀಡಿದರು.

ಪ್ರತಿಭಟನೆಯಲ್ಲಿ ಗೌರವಾಧ್ಯಕ್ಷ ವೆಂಕಟೇಶ್, ಉಪಾಧ್ಯಕ್ಷ ಶಿವಣ್ಣ, ಕಾರ್ಯದರ್ಶಿ ರಘು, ಜಿಲ್ಲಾ ಸಂಚಾಲಕ ಪುರುಷೋತ್ತಮ, ಕುಮಾರ್, ಬಾಬು, ಪುಟ್ಟಸ್ವಾಮಿ, ಶ್ರೀಧರ್ ಮತ್ತಿತರರು ಇದ್ದರು.

ವರದಿ : ಗಿರೀಶ್ ರಾಜ್, ಮಂಡ್ಯ

‘ಥಗ್ ಲೈಫ್’ ವಿವಾದ: ಕಮಲ್ ಹಾಸನ್ ಭಾಷಾ ಹೇಳಿಕೆಗೆ ಬಹಿಷ್ಕಾರ ಕರೆ | Thug of life

ನಾಳೆ ಗುಜರಾತ್, ರಾಜಸ್ಥಾನ, ಪಂಜಾಬ್ ಮತ್ತು ಜಮ್ಮು-ಕಾಶ್ಮೀರದಲ್ಲಿ ಅಣಕು ಕವಾಯತು | Mega security drill

Share. Facebook Twitter LinkedIn WhatsApp Email

Related Posts

ಕೇಳಿಸದ ಕಿವಿಗೆ ‘ಟೀಮ್ ಈಶ್ವರ್ ಮಲ್ಪೆ’ ಆಸರೆ: ಮೇ.12ರಂದು ಸಾಗರದಲ್ಲಿ ಉಚಿತ ಶ್ರವಣ ತಪಾಸಣಾ ಶಿಬಿರ!

29/04/2026 9:47 PM2 Mins Read

BREAKING: ಬೆಂಗಳೂರಲ್ಲಿ ರಣ ಮಳೆಗೆ ಮತ್ತೊಂದು ಬಲಿ: ಕರೆಂಟ್ ಶಾಕ್ ಹೊಡೆದು ವಿದ್ಯಾರ್ಥಿ ಸಾವು

29/04/2026 9:23 PM1 Min Read

30 ಕೋಟಿ ವೆಚ್ಚದಲ್ಲಿ ಮದ್ದೂರು ಸಾರ್ವಜನಿಕ ಆಸ್ಪತ್ರೆಗೆ ಹೈಟೆಕ್ ಸ್ಪರ್ಶ: ಮದ್ದೂರು ಶಾಸಕ ಕೆ.ಎಂ.ಉದಯ್

29/04/2026 9:07 PM1 Min Read
Recent News

ಕೇಳಿಸದ ಕಿವಿಗೆ ‘ಟೀಮ್ ಈಶ್ವರ್ ಮಲ್ಪೆ’ ಆಸರೆ: ಮೇ.12ರಂದು ಸಾಗರದಲ್ಲಿ ಉಚಿತ ಶ್ರವಣ ತಪಾಸಣಾ ಶಿಬಿರ!

29/04/2026 9:47 PM

BREAKING: ಬೆಂಗಳೂರಲ್ಲಿ ರಣ ಮಳೆಗೆ ಮತ್ತೊಂದು ಬಲಿ: ಕರೆಂಟ್ ಶಾಕ್ ಹೊಡೆದು ವಿದ್ಯಾರ್ಥಿ ಸಾವು

29/04/2026 9:23 PM

‘ದಿಗ್ಬಂಧನ ವಿಸ್ತರಣೆಗೂ ಮುನ್ನ ಒಪ್ಪಂದಕ್ಕೆ ಸಹಿ ಹಾಕಿ’: ಇರಾನ್‌ಗೆ ಡೊನಾಲ್ಡ್ ಟ್ರಂಪ್ ಖಡಕ್ ಎಚ್ಚರಿಕೆ!

29/04/2026 9:08 PM

30 ಕೋಟಿ ವೆಚ್ಚದಲ್ಲಿ ಮದ್ದೂರು ಸಾರ್ವಜನಿಕ ಆಸ್ಪತ್ರೆಗೆ ಹೈಟೆಕ್ ಸ್ಪರ್ಶ: ಮದ್ದೂರು ಶಾಸಕ ಕೆ.ಎಂ.ಉದಯ್

29/04/2026 9:07 PM
State News
KARNATAKA

ಕೇಳಿಸದ ಕಿವಿಗೆ ‘ಟೀಮ್ ಈಶ್ವರ್ ಮಲ್ಪೆ’ ಆಸರೆ: ಮೇ.12ರಂದು ಸಾಗರದಲ್ಲಿ ಉಚಿತ ಶ್ರವಣ ತಪಾಸಣಾ ಶಿಬಿರ!

By kannadanewsnow0929/04/2026 9:47 PM KARNATAKA 2 Mins Read

ಶಿವಮೊಗ್ಗ: ಇಂದಿನ ಒತ್ತಡದ ಜೀವನಶೈಲಿ ಹಾಗೂ ವಯೋಸಹಜ ಕಾರಣಗಳಿಂದ ಅನೇಕರು ಶ್ರವಣ ದೋಷಕ್ಕೆ (ಕೇಳಿಸಿಕೊಳ್ಳುವ ಸಮಸ್ಯೆ) ಒಳಗಾಗುತ್ತಿದ್ದಾರೆ. ಇಂತಹವರಿಗೆ ನೆರವಾಗುವ…

BREAKING: ಬೆಂಗಳೂರಲ್ಲಿ ರಣ ಮಳೆಗೆ ಮತ್ತೊಂದು ಬಲಿ: ಕರೆಂಟ್ ಶಾಕ್ ಹೊಡೆದು ವಿದ್ಯಾರ್ಥಿ ಸಾವು

29/04/2026 9:23 PM

30 ಕೋಟಿ ವೆಚ್ಚದಲ್ಲಿ ಮದ್ದೂರು ಸಾರ್ವಜನಿಕ ಆಸ್ಪತ್ರೆಗೆ ಹೈಟೆಕ್ ಸ್ಪರ್ಶ: ಮದ್ದೂರು ಶಾಸಕ ಕೆ.ಎಂ.ಉದಯ್

29/04/2026 9:07 PM

ಬೆಂಗಳೂರಲ್ಲಿ ವರುಣನ ಆರ್ಭಟಕ್ಕೆ ಕಾಂಪೌಂಡ್ ಕುಸಿದು 7 ಮಂದಿ ಬಲಿ; ಮೃತರ ಕುಟುಂಬಕ್ಕೆ ತಲಾ ₹5 ಲಕ್ಷ ಪರಿಹಾರ ಘೋಷಣೆ

29/04/2026 8:59 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.