ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿನಿಂದ ಮೆಟ್ರಿಕ್ ಪೂರ್ವ (9 ಮತ್ತು 10ನೇ ತರಗತಿ) ಹಾಗೂ ಮೆಟ್ರಿಕ್ ನಂತರ ಕೋರ್ಸ್ ಗಳಿಗೆ ಪ್ರವೇಶ ಪಡೆಯುವ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ವಿದ್ಯಾರ್ಥಿಗಳು ಭಾರತ ಸರ್ಕಾರದ Ministry of electronics and Information Technology ರವರು ಅಭಿವೃದ್ಧಿಪಡಿಸಿರುವ National Scholarship Portal https://ssp.postmatric.karnataka.gov.in ನಲ್ಲಿ One Time Registration ಸಂಖ್ಯೆಯನ್ನು ಕಡ್ಡಾಯವಾಗಿ Create ಮಾಡಿಕೊಂಡು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಮೂಲಕ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು (ಗ್ರೇಡ್-1), ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ದಕ್ಷಿಣ ತಾಲ್ಲೂಕು, ಎಸ್. ಕರಿಯಪ್ಪ ರಸ್ತೆ, ಬನಶಂಕರಿ, ಬೆಂಗಳೂರು ಅಥವಾ ದೂರವಾಣಿ ಸಂಖ್ಯೆ: 080-26711096 ಅನ್ನು ಸಂಪರ್ಕಿಸಬಹುದು ಎಂದು ಬೆಂಗಳೂರು ದಕ್ಷಿಣ ತಾಲ್ಲೂಕು, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.