ಮಡಿಕೇರಿ: ಜಿಲ್ಲೆಯಲ್ಲಿ ಇಂದು ಭಾರೀ ಮಳೆಯಾಗುವಂತ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕೊಡಗು ಜಿಲ್ಲೆಯಲ್ಲಿ ಇಂದು, ನಾಳೆ 2 ದಿನ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಈ ಕುರಿತಂತೆ ಮಡಿಕೇರಿ ಜಿಲ್ಲಾಧಿಕಾರಿ ವೆಂಕಟರಾಜಾ ಅವರು ಆದೇಶಿಸಿದ್ದು, ಗುರುವಾರ, ಶುಕ್ರವಾರದಂದು ಜಿಲ್ಲೆಯಲ್ಲಿ ಭಾರೀ ಮಳೆಯಾಗುವಂತ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಅಲ್ಲದೇ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದಿದ್ದಾರೆ.
ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕೊಡಗು ಜಿಲ್ಲೆಯ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ಇಂದು, ನಾಳೆ ರಜೆ ಘೋಷಿಸಲಾಗಿದೆ ಅಂತ ಡಿಸಿ ಆದೇಶದಲ್ಲಿ ತಿಳಿಸಿದ್ದಾರೆ.