ಬಳ್ಳಾರಿ : ಇತ್ತೀಚೆಗೆ ಹೃದಯಾಘಾತದ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ನರೇಗಾ ಕಾಮಕಾರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ವೇಳೆ ಹೃದಯಾಘಾತದಿಂದ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಬಳ್ಳಾರಿ ಜಿಲ್ಲೆಯಲ್ಲಿ ನಡೆದಿದೆ.
ಬಳ್ಳಾರಿ ಜಿಲ್ಲೆಯ ಕೊಟ್ಟೂರು ತಾಲೂಕಿನ ತೂಲಹಳ್ಳಿ ಗ್ರಾಮದಲ್ಲಿ ನರೇಗಾ ಕೆಲಸ ಮಾಡುತ್ತಿದ್ದ ವೇಳೆ ಹೃದಯಾಘಾತದಿಂದ ಹುಲುಗಪ್ಪ (60) ಎಂಬುವರು ಮೃತಪಟ್ಟಿದ್ದಾರೆ.
ಹುಲುಗಪ್ಪ ನರೇಗಾ ಕೆಲಸದ ವೇಳೆ ಎದೆನೋವು ಕಾಣಿಸಿಕೊಂಡಿದ್ದು, ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಅವರು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.