ಬೆಂಗಳೂರು : ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಬೆಂಗಳೂರಿನ ಕೆ.ಆರ್. ಮಾರುಕಟ್ಟೆ ಪ್ಲೈಓವರ್ ನಲ್ಲಿ ಎರಡು ಬೈಕ್ ಗಳ ನಡುವೆ ಡಿಕ್ಕಿಯಗಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಆಕಾಶ್ ಹಾಗೂ ಅಫ್ಜಲ್ ಎಂಬುವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.