ಅಹಮದಾಬಾದ್ : ಐಪಿಎಲ್ ಫೈನಲ್ ಪಂದ್ಯಕ್ಕೂ ಮುನ್ನ ಅಹಮದಾಬಾದ್ನಲ್ಲಿರುವ ನರೇಂದ್ರ ಮೋದಿ ಕ್ರೀಡಾಂಗಣದ ಹೊರಗೆ ಸಿಲಿಂಡರ್ ಸ್ಫೋಟಗೊಂಡಿದೆ.
ಐಪಿಎಲ್ 2025ರ ಅಂತಿಮ ಪಂದ್ಯ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ 11 ನಡುವೆ ನಡೆಯಲಿದೆ. ಐಪಿಎಲ್ ಪಂದ್ಯಕ್ಕೂ ಮುನ್ನ ಇಂದು ಬೆಳಗ್ಗೆ ಕ್ರೀಡಾಂಗಣದ ಮುಖ್ಯ ದ್ವಾರದ ಹೊರಗೆ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದೆ. ಆದಾಗ್ಯೂ, ಈ ಅಪಘಾತದಲ್ಲಿ ಯಾವುದೇ ಸಾವುನೋವುಗಳು ಸಂಭವಿಸಿಲ್ಲ ಎಂದು ವರದಿಯಾಗಿದೆ.
ಇಂದು ಬಹುನಿರೀಕ್ಷಿತ 18ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (IPL) ಫೈನಲ್ ಪಂದ್ಯ ನಡೆಯಲಿದ್ದು, ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಪಂಜಾಬ್ ಕಿಂಗ್ಸ್ (PBKS) ತಂಡಗಳು ಸೆಣಸಾಡಲಿವೆ.
ನಾಯಕ ಶ್ರೇಯಸ್ ಅಯ್ಯರ್ ನೇತೃತ್ವದಲ್ಲಿ, ಪಂಜಾಬ್ ಕಿಂಗ್ಸ್ ತಂಡವು ಕ್ವಾಲಿಫೈಯರ್ -2 ರಲ್ಲಿ ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವನ್ನು 5 ವಿಕೆಟ್‌ಗಳಿಂದ ಸೋಲಿಸಿ 11 ವರ್ಷಗಳ ನಂತರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನ ಫೈನಲ್‌ಗೆ ತಲುಪಿತು.
ಪಂಜಾಬ್ ಕಿಂಗ್ಸ್ ಕೊನೆಯ ಬಾರಿಗೆ 2014 ರಲ್ಲಿ ಐಪಿಎಲ್ ಫೈನಲ್ ಆಡಿತು ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಸೋತಿತು. ಐಪಿಎಲ್ ಇತಿಹಾಸದಲ್ಲಿ (ಒಟ್ಟು 18 ಸೀಸನ್‌ಗಳು), ಪಂಜಾಬ್ ತಂಡವು ಪ್ಲೇಆಫ್ ಮತ್ತು ಫೈನಲ್ ತಲುಪಿದ್ದು ಇದು ಕೇವಲ ಎರಡನೇ ಬಾರಿ. ಈಗ ಪ್ರಶಸ್ತಿ ಪಂದ್ಯದಲ್ಲಿ, ಪಂಜಾಬ್ ಕಿಂಗ್ಸ್ ಜೂನ್ 3 ರ ಇಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ರಜತ್ ಪಾಟಿದಾರ್ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಎದುರಿಸಲಿದೆ.