ಬೆಂಗಳೂರು: ಐಪಿಎಲ್-2025ರ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಾಗರರು ಬೆಂಗಳೂರಿನ ಹೆಚ್ ಎ ಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು. ಈ ತಂಡದ ವಿರಾಟ್ ಕೊಹ್ಲಿ ಭೇಟಿಯಾದಂತ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಕನ್ನಡ ಭಾವುಟ ನೀಡಿ ಆತ್ಮೀಯವಾಗಿ ಸ್ವಾಗತಿಸಿದರು.
ಅಹಮದಾಬಾದ್ ನಿಂದ ಬೆಂಗಳೂರಿನ ಹೆಚ್ ಎ ಎಲ್ ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಆಟಗಾರರು ಬಂದಿಳಿದಿದ್ದಾರೆ. ವಿಶೇಷ ವಿಮಾನದಲ್ಲಿ ಆಗಮಿಸಿದಂತ ಆರ್ ಸಿ ಬಿ ತಂಡವನ್ನು ಅದ್ಧೂರಿಯಾಗಿ ಸ್ವಾಗತಿಸಲಾಗಿದೆ.
ಪಂಜಾಬ್ ಕಿಂಗ್ಸ್ ವಿರುದ್ಧ ನಿನ್ನೆ ನಡೆದಂತ ಫೈನಲ್ ಪಂದ್ಯದಲ್ಲಿ 18 ವರ್ಷಗಳ ಬಳಿಕ ಆರ್ ಸಿ ಬಿ ಗೆಲುವು ಕಂಡಿತ್ತು. ಹೀಗಾಗಿ ರಾಜ್ಯ ಸರ್ಕಾರ ತಂಡದ ಆಟಗಾರರಿಗೆ ಸನ್ಮಾನಿಸಿ, ಅಭಿನಂದಿಸುವಂತ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಬೆಂಗಳೂರಿನ ವಿಧಾನಸೌಧದ ಬೃಹತ್ ಮೆಟ್ಟಿಲಿನ ಮೇಲೆ ಸಂಜೆ 4 ಗಂಟೆಗೆ ಆರ್ ಸಿ ಬಿ ತಂಡದ ಎಲ್ಲಾ ಆಟಗಾರರನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಸನ್ಮಾನಿಸಿ, ಅಭಿನಂದಿಸಲಿದ್ದಾರೆ.
ಇದಕ್ಕೂ ಮುನ್ನ ಹೆಚ್ ಎ ಎಲ್ ವಿಮಾನ ನಿಲ್ದಾಣಕ್ಕೆ ತೆರಳಿದಂತ ಡಿಸಿಎಂ ಡಿ.ಕೆ ಶಿವಕುಮಾರ್ ಅವರು, ಆರ್ ಸಿ ಬಿ ತಂಡವನ್ನು ಸ್ವಾಗತಿಸಿದರು. ಇದೇ ಸಂದರ್ಭದಲ್ಲಿ ವಿರಾಟ್ ಕೊಹ್ಲಿಗೆ ಕನ್ನಡ ಭಾವುಟ ನೀಡಿ ಡಿಸಿಎಂ ಡಿ.ಕೆ ಶಿವಕುಮಾರ್ ಸ್ವಾಗತಿಸಿದ್ದು ಗಮನ ಸೆಳೆಯಿತು.
IPL ಚಾಂಪಿಯನ್ RCBಯಿಂದ ವಿಕ್ಟರಿ ಸಮಾರಂಭ: ಚಿನ್ನಸ್ವಾಮಿ ಸ್ಟೇಡಿಯಂ ಪ್ರವೇಶಕ್ಕೆ ಆನ್ ಲೈನ್ ಟಿಕೆಟ್ ಬಿಡುಗಡೆ