ಬೆಂಗಳೂರು : 18ನೇ ಆವೃತ್ತಿಯ ಐಪಿಎಲ್ ಫೈನಲ್ ಗೆದ್ದು ಚಾಂಪಿಯನ್ ಆಗಿರುವ ಸಂಭ್ರಮದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರು ಬೆಂಗಳೂರು ನಗರಕ್ಕೆ ಬಂದಿಳಿದಿದ್ದು, ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ.
ಈ ಹಿನ್ನೆಲೆಯಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ತಂಡಕ್ಕೆ ಸಂಜೆ 5 ರಿಂದ 6 ರವರೆಗೆ ಸನ್ಮಾನ ಸಮಾರಂಭ ಇರುವುದರಿಂದ ಮಧ್ಯಾಹ್ನ 3 ರಿಂದ ರಾತ್ರಿ 8 ರವರೆಗೆ ವಿಧಾನಸೌಧ ಮತ್ತು ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತಮುತ್ತಲಿನ ರಸ್ತೆಗಳನ್ನು ಬಳಸದಂತೆ ಸಲಹೆ ನೀಡಲಾಗಿದೆ. ವಿಜಯೋತ್ಸವ ಮೆರವಣಿಗೆ ಇರುವುದಿಲ್ಲ, ಸೀಮಿತ ಪಾರ್ಕಿಂಗ್ ಇರುವುದರಿಂದ ಸಾರ್ವಜನಿಕರು ಮೆಟ್ರೋ ಮತ್ತು ಇತರ ಸಾರ್ವಜನಿಕ ಸಾರಿಗೆಯನ್ನು ಬಳಸುವಂತೆ ಸೂಚಿಸಲಾಗಿದೆ.
— ಬೆಂಗಳೂರು ಸಂಚಾರ ಪೊಲೀಸ್ BengaluruTrafficPolice (@blrcitytraffic) June 4, 2025