ಬೆಂಗಳೂರು : 18ನೇ ಆವೃತ್ತಿಯ ಐಪಿಎಲ್ ಫೈನಲ್ ಗೆದ್ದು ಚಾಂಪಿಯನ್ ಆಗಿರುವ ಸಂಭ್ರಮದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರು ಬೆಂಗಳೂರು ನಗರಕ್ಕೆ ಬಂದಿಳಿದಿದ್ದು, ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ. ಈ ನಡುವೆ ಸಂಭ್ರಮಾಚರಣೆಗೆ ಬಂದಿದ್ದ ಅಭಿಮಾನಿಯೊಬ್ಬ ಸಾವನ್ನಪ್ಪಿದ್ದಾನೆ.
ವಿಧಾನಸೌಧ ಮೆಟ್ಟಿಲುಗಳ ಮೇಲೆ ಅಭಿನಂದನಾ ಕಾರ್ಯಕ್ರಮ ನಡೆಯುತ್ತಿದೆ. ಆರ್ಸಿಬಿ ಆಟಗಾರರನ್ನು ಸ್ವಾಗತಿಸಲು ಅಭಿಮಾನಿಗಳು ಕಿಕ್ಕಿರಿದು ಸೇರಿದ್ದಾರೆ. ಈ ನಡುವೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಅಭಿಮಾನಿಗಳು ಭಾರೀ ಸಂಖ್ಯೆಯಲ್ಲಿ ಸೇರಿದ್ದು, ಗೇಟ್ ನಂ.12 ರಲ್ಲಿ ಕಾಲ್ತುಳಿತ ಉಂಟಾಗಿದ್ದು, ಈ ವೇಳೆ ಕೆಲ ಅಭಿಮಾನಿಗಳು ಅಸ್ವಸ್ಥರಾಗಿದ್ದಾರೆ. ಈ ವೇಳೆ ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ. ಕಾಲ್ತುಳಿತದಲ್ಲಿ ಯುವಕನೋರ್ವನಿಗೆ ಕಾಲು ಮುರಿತವಾಗಿದೆ. ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ. ಹಲವರ ಸ್ಥಿತಿ ಗಂಭೀರವಾಗಿದೆ.
#WATCH | Karnataka police use mild force to manage the crowd outside M Chinnaswamy Stadium in Bengaluru
A large number of #RoyalChallengersBengaluru fans have arrived here to catch a glimpse of their champion team
A special felicitation ceremony has been organised by the… pic.twitter.com/lQvGEE2LNj
— ANI (@ANI) June 4, 2025