ಬೆಂಗಳೂರು : ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದಲ್ಲಿ 11 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಈ ದುರಂತಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಬೆಂಗಳೂರಿನಲ್ಲಿ ನಡೆದ ಅಪಘಾತ ನಿಜಕ್ಕೂ ಹೃದಯವಿದ್ರಾವಕ. ಈ ದುರಂತದ ಸಮಯದಲ್ಲಿ, ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಎಲ್ಲರೊಂದಿಗೆ ನನ್ನ ಆಲೋಚನೆಗಳು ಇವೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ.
The mishap in Bengaluru is absolutely heartrending. In this tragic hour, my thoughts are with all those who have lost their loved ones. I pray that those who are injured have a speedy recovery: Prime Minister Narendra Modi pic.twitter.com/ed60yp2FYt
— ANI (@ANI) June 4, 2025
ಆಭಿಮಾನದ ಹೆಸರಲ್ಲಿ ಭಾರಿ ದುರಂತ ಸಂಭವಿಸಿದ್ದು, ಬೌರಿಂಗ್ ಆಸ್ಪತ್ರೆ ಮಾತ್ರವಲ್ಲ ಮಲ್ಯ ರಸ್ತೆಯ ವೈದೇಹಿ ಆಸ್ಪತ್ರೆಗೂ ಗಾಯಾಳುಗಳನ್ನು ದಾಖಲಿಸಲಾಗಿದೆ. ಸದ್ಯ 7 ಮಂದಿಗೆ ವೈದೇಹಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಇದರಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಒಟ್ಟು ಘಟನೆಯಲ್ಲಿ 11 ಮಂದಿ ಸಾವನ್ನಪ್ಪಿದ್ದಾರೆ.