ಶಿವಮೊಗ್ಗ: ಸಾಗರದ ಜನರಿಗೆ ಮತ್ತಷ್ಟು ಉತ್ತಮ ಆರೋಗ್ಯ ಸೇವೆಯನ್ನು ಒದಗಿಸುವ ನಿಟ್ಟಿನಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಮಹತ್ವದ ಹೆಜ್ಜೆ ಇರಿಸಿದ್ದಾರೆ. ಅದೇ ಇಂದು ನಗರದಲ್ಲಿ ನಮ್ಮ ಕ್ಲಿನಿಕ್ ಉದ್ಘಾಟಿಸುವ ಮೂಲಕ ಜನರಿಗೆ ಗುಡ್ ನ್ಯೂಸ್ ನೀಡಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಸಾಗರ ನಗರದಲ್ಲಿ ನಮ್ಮ ಕ್ಲಿನಿಕ್ ಅನ್ನು ಶಾಸಕ ಗೋಪಾಲಕೃಷ್ಣ ಬೇಳೂರು ಉದ್ಘಾಟಿಸಿದರು. ಸಾಗರದ ಬಿಹೆಚ್ ರಸ್ತೆಯ ಟಿವಿಎಸ್ ಶೋ ರೂಂ ಹಿಂಭಾಗದಲ್ಲಿ ನಮ್ಮ ಕ್ಲಿನಿಕ್ ಸಾರ್ವಜನಿಕರ ಸೇವೆಗೆ ಶಾಸಕರು ಲೋಕಾರ್ಪಣೆಗೊಳಿಸಿದರು.
ಈ ಬಳಿಕ ಮಾತನಾಡಿದಂತ ಅವರು ಸಾಗರದ ಖಾಸಗಿ ಬಸ್ ನಿಲ್ದಾಣದ ಸಮೀಪದಲ್ಲೇ ನಮ್ಮ ಕ್ಲಿನಿಕ್ ತೆರೆಯಲಾಗಿದೆ. ಸಾಗರ ತಾಲ್ಲೂಕಿನ ವಿವಿಧ ಊರುಗಳಿಂದ ಆಗಮಿಸುವವರಿಗೆ ಬಸ್ ನಿಲ್ದಾಣದ ಸಮೀಪದಲ್ಲೇ ನಮ್ಮ ಕ್ಲಿನಿಕ್ ನಲ್ಲಿ ಅನಾರೋಗ್ಯಕ್ಕೆ ಚಿಕಿತ್ಸೆ ಸಿಗುವಂತ ಕೆಲಸ ಮಾಡಲಾಗಿದೆ. ‘ನಮ್ಮ ಕ್ಲಿನಿಕ್’ಗಳಲ್ಲಿ ತಲಾ ಒಬ್ಬರು ವೈದ್ಯಾಧಿಕಾರಿ, ಶುಶ್ರೂಷಕರು, ಪ್ರಯೋಗಶಾಲಾ ತಂತ್ರಜ್ಞರು, ಡಿ-ದರ್ಜೆ ನೌಕರರು ಇರಲಿದ್ದಾರೆ. ಒಟ್ಟು 12 ಆರೋಗ್ಯ ಸೇವೆಗಳ ಪ್ಯಾಕೇಜ್ ಲಭ್ಯವಿದ್ದು, ಬಡವರು, ಕೂಲಿ ಕಾರ್ಮಿಕರಿಗೆ, ದಿನಗೂಲಿ ನೌಕರರಿಗೆ ಇದು ಸಂಜೀವಿನಿಯಾಗಲಿದೆ ಎಂದರು.
ನಮ್ಮ ಕ್ಲಿನಿಕ್ ನಲ್ಲಿ ವಿವಿಧ ರೋಗಗಳಿಗೆ ಚಿಕಿತ್ಸೆ ನೀಡಲಾಗುತ್ತದೆ. ಗರ್ಭಿಣಿಯರು, ವೃದ್ಧರಿಗೂ, ಅನಾರೋಗ್ಯ ಪೀಡಿದರು ಉಚಿತವಾಗಿ ಚಿಕಿತ್ಸೆಯ ವ್ಯವಸ್ಥೆ ಮಾಡಲಾಗಿದೆ. ಅಸಹಾಯಕರು ಬಡವರಿಗೆ ಅನುಕೂಲ ಆಗಲಿ ಎಂದು ರಾಜ್ಯದ ನಗರ ಪ್ರದೇಶಗಳಲ್ಲಿ ನಮ್ಮ ಕ್ಲಿನಿಕ್ ಗಳನ್ನ ತೆರೆಯಲಾಗಿದೆ. ‘ನಮ್ಮ ಕ್ಲಿನಿಕ್’ಗಳು ನಗರ ಪ್ರದೇಶದ ಬಡ, ದುರ್ಬಲ ವರ್ಗದ ಜನರಿಗೆ ಗುಣಮಟ್ಟದ ಮತ್ತು ಸಮಗ್ರ ಪ್ರಾಥಮಿಕ ಆರೋಗ್ಯ ಸೇವೆಗಳನ್ನು ಒಳಗೊಂಡಿದೆ. ಉಚಿತ ರೆಫರಲ್ ಸೇವೆಗಳನ್ನು ಒದಗಿಸುವ ಮುಖಾಂತರ ದ್ವಿತೀಯ ಮತ್ತು ತೃತೀಯ ಹಂತದ ಆಸ್ಪತ್ರೆಗಳಿಗೂ ಸಂಪರ್ಕ ಕಲ್ಪಿಸುತ್ತದೆ. ಆರೋಗ್ಯ ಸೇವೆಗಳನ್ನು ಪಡೆಯಲು ತಗುಲುವ ವೆಚ್ಚ ಕಡಿಮೆ ಮಾಡಲು ಸಹಕಾರಿಯಾಗಿದೆ ಎಂದರು.
ಈ ಕ್ಲಿನಿಕ್‌ಗಳು ಬೆಳಗ್ಗೆ 9 ರಿಂದ ಸಂಜೆ 4.30 ರವರೆಗೆ ಪ್ರತಿ ಸೋಮವಾರದಿಂದ ಶನಿವಾರದವರೆಗೆ ಕಾರ್ಯನಿರ್ವಹಿಸಲಿವೆ. ನಿರೀಕ್ಷಣಾ ಸ್ಥಳ, ಹೊರ ರೋಗಿಗಳ ತಪಾಸಣೆ ಕೊಠಡಿ, ಚುಚ್ಚು ಮದ್ದು ನೀಡುವ ಕೊಠಡಿ, ಪ್ರಯೋಗಶಾಲೆ, ಔಷಧಿ ದಾಸ್ತಾನು ಮತ್ತು ವಿತರಣಾ ಕೊಠಡಿ, ಅಡಳಿತ ಕಚೇರಿ, ಹೀಗೆ ಪ್ರತ್ಯೇಕ ಕೊಠಡಿಗಳಿವೆ. ಆಸ್ಪತ್ರೆ ಸಿಬ್ಬಂದಿ, ಮಹಿಳಾ ಮತ್ತು ಪುರುಷ ರೋಗಿಗಳಿಗೆ ಪ್ರತ್ಯೇಕ ಶೌಚಾಲಯ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ತಿಳಿಸಿದರು.
ಸಾಮಾನ್ಯವಾಗಿರುವ ನೆಗಡಿ, ಕೆಮ್ಮಿನ ಜೊತೆಗೆ ಬಿ.ಪಿ, ಮಧುಮೇಹ ಮುಂತಾದ ಕಾಯಿಲೆಗಳ ತಪಾಸಣೆ ಹಾಗೂ ಪರೀಕ್ಷೆಯೂ ಆಗುತ್ತದೆ. ಔಷಧಿಯನ್ನೂ ಉಚಿತವಾಗಿ ನೀಡಲಾಗುತ್ತದೆ. ಇದಲ್ಲದೇ ಪ್ರಯೋಗಾಲಯದ ವ್ಯವಸ್ಥೆ ಕೂಡ ಇದ್ದು, ಬಿಪಿ, ಶುಗರ್ ಚೆಕ್ ಮಾಡುತ್ತಾರೆ. ಸಾಗರ ನಗರದ ಜನರು ಇದರ ಸದುಪಯೋಗ ಮಾಡಿಕೊಳ್ಳುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷೆ ಮೈತ್ರಿ ಪಾಟೀಲ್, ಉಪಾಧ್ಯಕ್ಷ ಸವಿತಾ ವಾಸು, ಸದಸ್ಯರಾದಂತ ಗಣಪತಿ ಮಂಡಗಳಲೆ, ಮಧು ಮಾಲತಿ, ಕಲಸೆ ಚಂದ್ರಪ್ಪ, ಡಿಹೆಚ್ಓ ನಟರಾಜ್ ನಾಯ್ಕ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ವಸಂತ ಬಿ ಈಶ್ವರಗೆರೆ.., ಸಂಪಾದಕರು
BREAKING: ರಾಜ್ಯದಲ್ಲಿಂದು ಕೊರೋನಾಗೆ ಮತ್ತಿಬ್ಬರು ಬಲಿ: 153 ಜನರಿಗೆ ಸೋಂಕು ದೃಢ | Covid19 Update
ಸಂಸ್ಕೃತದಲ್ಲಿ 125ಕ್ಕೆ 125 ಅಂಕ ತೆಗೆದ ‘ಮುಸ್ಲೀಂ ವಿದ್ಯಾರ್ಥಿನಿ’ಗೆ ಬೈಕ್ ಗಿಫ್ಟ್ ಕೊಟ್ಟ ‘ಸಚಿವ ಜಮೀರ್ ಅಹ್ಮದ್’