ಬೆಂಗಳೂರು: ಚಾಮರಾಜನಗರ ಜಿಲ್ಲೆ ಮಲೆಮಹದೇಶ್ವರ ಬೆಟ್ಟದಲ್ಲಿ ಜೂನ್ 21ಕ್ಕೆ ನಡೆಯಲಿರುವ, ಪತ್ರಕರ್ತರ ಮಕ್ಕಳ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರನ್ನು ವಿಧಾನ ಸೌಧದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಆಹ್ವಾನ ನೀಡಿದರು.
ಈ ಸಂದರ್ಭದಲ್ಲಿ ಚಿತ್ರದುರ್ಗ ಜಿಲ್ಲಾ ಘಟಕದ ಅಧ್ಯಕ್ಷ ಬಿ.ದಿನೇಶ್ ಗೌಡಗೆರೆ, ಕನಕಪುರ ತಾಲ್ಲೂಕು ಘಟಕದ ಅಧ್ಯಕ್ಷ ಗಿರೀಶ್, ಪದಾಧಿಕಾರಿಗಳಾದ ವೆಂಕಟೇಶ, ಎ ಬಿ.ಕುಮಾರ್, ಕಾ.ಪ್ರಕಾಶ್, ಹಿರಿಯೂರು ಟಿ.ಪ್ರಸನ್ನ ಇದ್ದರು.