ಶಾಲಾ ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ಅನುದಾನ ರಹಿತ ಖಾಸಗಿ ಶಾಲೆಗಳಲ್ಲಿ 2025-26ನೇ ಸಾಲಿಗೆ ಪ್ರವೇಶಾತಿ ಸಂದರ್ಭದಲ್ಲಿ ಪಡೆಯುವ ಶುಲ್ಕವನ್ನು ಇಲಾಖೆ ಜಾಲತಾಣದಲ್ಲಿ ಹಾಗೂ ಸೂಚನಾ ಫಲಕದಲ್ಲಿ ಪ್ರಕಟಿಸಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಕೊಟ್ರೇಶ್.ಜಿ ತಿಳಿಸಿದ್ದಾರೆ.
ಶಿಕ್ಷಣ ಹಕ್ಕು ಕಾಯ್ದೆ-2009 ಹಾಗೂ ಕರ್ನಾಟಕ ಎಜುಕೇಷನ್ ಇನ್‌ಸ್ಟçಕ್ಷನ್ಸ್ ರೂಲ್ಸ್-1985 ನಿಯಮಾನುಸಾರ ಮಾನ್ಯತೆ ಪಡೆದಿರುವ ಎಲ್ಲಾ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಸಾರ್ವಜನಿಕರಿಗೆ, ಪೋಷಕರಿಗೆ ಗಮನಕ್ಕೆ ಬರುವಂತೆ ಇಲಾಖೆ ಜಾಲತಾಣದಲ್ಲಿ ಹಾಗೂ ಸೂಚನಾ ಫಲಕದಲ್ಲಿ ಪ್ರಕಟಿಸಬೇಕು.
ಒಂದು ವೇಳೆ ಕ್ರಮವಹಿಸದಿದ್ದ ಪಕ್ಷದಲ್ಲಿ ಆಡಳಿತ ಮಂಡಳಿ ವಿರುದ್ಧ ಜಿಲ್ಲಾ ಶಿಕ್ಷಣ ನಿಯಂತ್ರಣ ಪ್ರಾಧಿಕಾರದಿಂದ ಸೂಕ್ತ ಕ್ರಮಕೈಗೊಳ್ಳಲಾಗುವುದು. ಈ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ಕ್ಷೇತ್ರಶಿಕ್ಷಣಾಧಿಕಾರಿಗಳು, ಖಾಸಗಿ ಅನುದಾನ ರಹಿತ ಶಾಲೆಗಳು ಇಲಾಖೆ ನಿಯಮಗಳನ್ನು ಪಾಲಿಸುತ್ತಿರುವ ಕುರಿತು ಪರಿಶೀಲಿಸಬೇಕು. ಕ್ರಮವಹಿಸದ ಶಾಲೆಗಳ ಮಾಹಿತಿಯನ್ನು ಇಲಾಖೆ ಗಮನಕ್ಕೆ ತರಬೇಕೆಂದು ತಿಳಿಸಿದ್ದಾರೆ.