ಬೆಂಗಳೂರು : ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತದಲ್ಲಿ 11 RCB ಅಭಿಮಾನಿಗಳ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ KSCA ಕಾಯರ್ದರ್ಶಿ, ಖಜಾಂಚಿ ಮನೆಗಳ ಮೇಲೆ ದಾಳಿ ನಡೆಸಲಾಗಿದೆ.
ನಿನ್ನೆ ರಾತ್ರಿ KSCA ಕಾಯರ್ದರ್ಶಿ ಶಂಕರ್ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದಾರೆ. KSCA ಖಜಾಂಚಿ ಜಯರಾಮ್ ಮನೆ ಮೇಲೂ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ದಾಳಿ ವೇಳೆ ಇಬ್ಬರೂ ನಾಪತ್ತೆಯಾಗಿದ್ದಾರೆ.
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಆರ್ ಸಿ ಬಿ ಮಾನ್ಯೇಜ್ ಮೆಂಟ್ ನ ಮೂವರು ಆಯೋಜಕರನ್ನು ಬಂಧಿಸಿದ್ದಾರೆ.
ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಹಾಗೂ ಸಿಸಿಬಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಆರ್ ಸಿಬಿ ಮ್ಯಾನೇಜ್ಮೆಂಟ್ ಸಿಬ್ಬಂದಿ ನಿಖಲ್ ಸೋಸಲೆ, DNA ಮ್ಯಾನೇಜ್ಮೆಂಟ್ ಸಿಬ್ಬಂದಿ ಸುನೀಲ್ ಮ್ಯಾಥ್ಯೂ , ಕಿರಣ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.