ಬೆಂಗಳೂರು: 2025ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-3 ಜೂನ್.9ರಿಂದ ಆರಂಭಗೊಳ್ಳಲಿದೆ. ಈ ಹಿನ್ನಲೆಯಲ್ಲಿ ಪರೀಕ್ಷಾ ಕೇಂದ್ರದ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಆದೇಶಿಸಿದ್ದಾರೆ.
ಈ ಸಂಬಂಧ ಇಂದು ಆದೇಶ ಹೊರಡಿಸಿರುವಂತ ಅವರು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವತಿಯಿಂದ ದಿನಾಂಕ: 09-06-2025 ರಿಂದ 20-06-2025 ರವರೆಗೆ 2025ನೇ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆ -3 ಅನ್ನು (ಬೆಂಗಳೂರು ದಕ್ಷಿಣ-22 & ಬೆಂಗಳೂರು ಉತ್ತರ-12) ಒಟ್ಟು 34 ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಿದ್ದು, ಪರೀಕ್ಷೆಗಳನ್ನು ಸುಗಮವಾಗಿ ಹಾಗೂ ಸುವ್ಯವಸ್ಥಿತವಾಗಿ ನಡೆಸುವ ಸಲುವಾಗಿ ಪರೀಕ್ಷಾ ದಿನಗಳಂದು ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಸ್ಥಳವೆಂದು ಘೋಷಿಸುವಂತೆ ಹಾಗೂ ನಿಷೇಧಿತ ಪುದೇಶದಲ್ಲಿ ಜೆರಾಕ್ಸ್ / ಸೈಬರ್/ ಕಂಪ್ಯೂಟರ್ ಸೆಂಟರ್ಗಳನ್ನು ಮುಚ್ಚುವಂತೆ ಕ್ರಮ ವಹಿಸಲು ಕೋರಲಾಗಿರುತ್ತದೆ ಎಂದಿದ್ದಾರೆ.
ಈ ವಿಷಯದ ಬಗ್ಗೆ ನಾನು ಖುದ್ದಾಗಿ ಮಾಡಿದ ವಿಚಾರಣೆಯಿಂದ ಮತ್ತು ಗುಪ್ತವಾರ್ತಾ ವರದಿಯಿಂದ 2025ನೇ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆ -3 ಅನ್ನು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸುವ ಉದ್ದೇಶದಿಂದ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯ ಪ್ರದೇಶಕ್ಕೆ ಅನ್ವಯಿಸುವಂತೆ ನಿಷೇಧಾಜ್ಞೆ ಹೊರಡಿಸುವುದು ಅಗತ್ಯವಿರುವುದನ್ನು ಮನಗಂಡಿರುತ್ತೇನೆ ಎಂದು ಹೇಳಿದ್ದಾರೆ.
ಈ ದಿಸೆಯಲ್ಲಿ 2025ನೇ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆ -3 ಅನ್ನು ಸುಸೂತ್ರವಾಗಿ ಹಾಗೂ ದೋಷರಹಿತವಾಗಿ ನಡೆಸುವ ದೃಷ್ಟಿಯಿಂದ, ನನಗೆ ನನಗೆ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ ಕಲಂ 163 ಪ್ರಕರಣದ ಅನ್ವಯ ಪುದತ್ತವಾದ ಅಧಿಕಾರವನ್ನು ಚಲಾಯಿಸಿ, ಸೀಮಂತ್ ಕುಮಾರ್ ಸಿಂಗ್, ಐ.ಪಿ.ಎಸ್, ಪೊಲೀಸ್ ಆಯುಕ್ತರು, ಬೆಂಗಳೂರು ನಗರ ಆದ ನಾನು, ಬೆಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ದಿನಾಂಕ: 09-06-2025 ರಿಂದ 20-06-2025 ರವರೆಗೆ 2025ನೇ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆ -3 ಅನ್ನು ನಡೆಯುವ ದಿನಗಳಂದು ಮತ್ತು ಪರೀಕ್ಷೆ ನಡೆಯುವ ಸಮಯದಲ್ಲಿ ಎಲ್ಲಾ ಪರೀಕ್ಷಾ ಕೇಂದ್ರಗಳ 200 ಮೀಟರ್ ಸುತ್ತಲಿನ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಜೆರಾಕ್ಸ್ / ಸೈಬರ್ / ಕಂಪ್ಯೂಟರ್ ಸೆಂಟರ್ ಅಂಗಡಿಗಳನ್ನು ಮುಚ್ಚುವಂತೆ ಘೋಷಿಸಿ ಪ್ರತಿಬಂಧಕಾಜ್ಞೆಯನ್ನು ವಿಧಿಸಿ ಆದೇಶ ಹೊರಡಿಸಿದ್ದಾರೆ.
ಈ ನಡವಳಿಯನ್ನು ನನ್ನ ಸಹಿ ಮತ್ತು ನನ್ನ ಕಛೇರಿಯ ಮೊಹರಿನಲ್ಲಿ 2025ರ ಜೂನ್ ಮಾಹೆಯ ದಿನಾಂಕ: 6 ರಂದು ಹೊರಡಿಸಲಾಗಿದೆ ಎಂದು ತಿಳಿಸಿದ್ದಾರೆ.