ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯಲ್ಲಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ ಸಿಬಿ, ಕೆ ಎಸ್ ಸಿ ಎ, ಡಿಎನ್ಎ ಕಂಪನಿಗಳ ವಿರುದ್ಧ 3ನೇ ಎಫ್ಐಆರ್ ದಾಖಲಾಗಿದೆ.
ಇಂದು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯಲ್ಲಿ ಕಾಲ್ತುಳಿತ ಉಂಟಾಗಿದ್ದಂತ ವೇಳೆಯಲ್ಲಿ ಗಾಯಗೊಂಡಿದ್ದಂತ ಬಿಕಾಂ ವಿದ್ಯಾರ್ಥಿ ಸಿ.ವೇಣು ಅವರು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ.
ಆರ್ ಸಿ ಬಿ ಜಾಹೀರಾತು ನೋಡಿ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಬಂದಿದ್ದೆ. ಆರ್ ಸಿ ಬಿ ವಿಜಯೋತ್ಸವ ವೀಕ್ಷಣೆಗೆ ಉಚಿತ ಟಿಕೆಟ್ ಎಂದು ಬಂದಿದ್ದೆ. ಕ್ರೀಡಾಂಗಣದ ಗೇಟ್ ನಂ.6ರ ಬಳಿಯಲ್ಲಿ ನೂಕು ನುಗ್ಗಲು ಉಂಟಾಗಿತ್ತು. ಈ ವೇಳೆ ಬಲಗಾಲಿನ ಮೇಲೆ ಬ್ಯಾರಿಕೇಡ್ ಬಿದ್ದಿತ್ತು. ಹೀಗಾಗಿ ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾಗಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ವಿದ್ಯಾರ್ಥಿ ಸಿ ವೇಣು ನೀಡಿದಂತ ದೂರಿನ ಹಿನ್ನಲೆಯಲ್ಲಿ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಆರ್ ಸಿ ಬಿ, ಕೆ ಎಸ್ ಸಿಎ, ಡಿಎನ್ ಎ ಕಂಪನಿಯ ವಿರುದ್ಧ 3ನೇ ಎಫ್ಐಆರ್ ದಾಖಲಾಗಿದೆ.
BREAKING: ಬೆಂಗಳೂರಲ್ಲಿ ಮೆಟ್ರೋ ಪಿಲ್ಲರ್ ಗೆ ‘BMTC ಬಸ್’ ಡಿಕ್ಕಿ: 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
ಬೆಂಗಳೂರು ಕಾಲ್ತುಳಿತ ದುರಂತ ಕೇಸ್: ಸಿಎಂ, ಡಿಸಿಎಂ ರಾಜೀನಾಮೆಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆಗ್ರಹ