ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಜೂನ್ 11ರಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದಲ್ಲಿ ಜೂ.11ರಿಂದ ಮತ್ತೆ ಮುಂಗಾರು ಮಳೆಯ ಆರ್ಭಟ ಶುರುವಾಗಲಿದ್ದು, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಜೂ.11ಕ್ಕೆ ಬಳ್ಳಾರಿ, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಜೂ.12ಕ್ಕೆ ವಿಜಯನಗರ, ಕೊಡಗು, ದಾವಣಗೆರೆ, ಚಿಕ್ಕಬಳ್ಳಾಪುರ, ಬಳ್ಳಾರಿ, ವಿಜಯಪುರ, ಕಲಬುರಗಿ, ಬೆಳಗಾವಿ, ಬಾಗಲಕೋಟೆ ಹಾಗೂ ಕರಾವಳಿ ಜಿಲ್ಲೆಯ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ನ ಮುನ್ಸೂಚನೆ ನೀಡಲಾಗಿದೆ.
ಮುಂಗಾರು ಆರಂಭದ ಜೂನ್ ಮೊದಲ ವಾರವೇ ಮಳೆ ಕೊರತೆ ಕಾಣಿಸಿಕೊಂಡಿದೆ. ಜೂ.1 ರಿಂದ 4 ವರೆಗಿನ ಅವಧಿಯಲ್ಲಿ ರಾಜ್ಯದಲ್ಲಿ 18.9 ಮಿ.ಮೀ. ನಷ್ಟು ವಾಡಿಕೆ ಮಳೆಯಾಗಬೇಕು. ಆದರೆ 11.6 ಮಿ.ಮೀ. ಅಷ್ಟೇ ಮಳೆಯಾಗಿದೆ. ಈ ಮೂಲಕ ಶೇ.39ರಷ್ಟು ಮಳೆ ಕೊರತೆ ಉಂಟಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.