ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಜೈಲುಪಾಲಾಗಿದ್ದಂತ ಕಾಮಿಡಿ ಕಿಲಾಡಿಗಳು ಖ್ಯಾತಿಯ ಮಡೆನೂರು ಮನು ಇಂದು ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾಗಿದ್ದಾರೆ.
ಸಹ ಕಲಾವಿದೆಯ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ಮಡೆನೂರು ಮನು ಬಂಧನವಾಗಿತ್ತು. ಅವರನ್ನು ಪೊಲೀಸರು ಬಂಧಿಸಿ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಿದ್ದರು. ಈ ಪ್ರಕರಣದಲ್ಲಿ ಜಾಮೀನು ಕೋರಿದ್ದಂತ ಅವರಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿತ್ತು.
ಇಂದು ಪರಪ್ಪನ ಅಗ್ರಹಾರದಿಂದ ಮಡೆನೂರು ಮನು ಬಿಡುಗಡೆಯಾಗಿದ್ದಾರೆ. ಈ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ದರ್ಶನ್, ಶಿವರಾಜ್ ಕುಮಾರ್ ಹಾಗೂ ಧ್ರುವ ಸರ್ಜಾ ಬಗ್ಗೆ ಮಾತನಾಡಿರುವಂತ ಆಡಿಯೋ ನನ್ನದಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದ್ದಾರೆ.
ನಾನು ಮೊದಲು ಶಿವಣ್ಣ ಅವರನ್ನು ಭೇಟಿ ಮಾಡಿ ಅವರಿಗೆ ನಡೆದ ಎಲ್ಲಾ ಘಟನೆಯನ್ನು ತಿಳಿಸುತ್ತೇನೆ. ಮೂರು ವರ್ಷಗಳ ಶ್ರಮವನ್ನು ಹಾಳು ಮಾಡಿದ್ದಾರೆ. ಐದಾರು ಮಂದಿ ಸೇರಿಕೊಂಡು ನನ್ನ ಮೇಲೆ ಪ್ಲಾನ್ ಮಾಡಿ ಈ ರೀತಿ ಮಾಡಿದ್ದಾರೆ ಎಂಬುದಾಗಿ ಬೇಸರ ವ್ಯಕ್ತ ಪಡಿಸಿದರು.
ನನ್ನ ಸಿನಿಮಾ ರಿಲೀಸ್ ಆಗುವುದನ್ನು ತಡೆಯಲು ಸಾಕಷ್ಟು ಪ್ರಯತ್ನ ನಡೆಸಲಾಯಿತು. ಅದರ ನಡುವೆ ಸಿನಿಮಾ ರಿಲೀಸ್ ಆಯ್ತು. ನನ್ನ ವಿರುದ್ಧ ಹೆಜ್ಜೆ ಹೆಜ್ಜೆಗೂ ಷಡ್ಯಂತ್ರ ನಡೆದಿದೆ. ಇದರ ನಡುವೆ ಸಿನಿಮಾ ರಿಲೀಸ್ ಆಗಿ, ಕಲೆ ತಾಯಿ ನನ್ನ ಕೈಬಿಡಲಿಲ್ಲ ಎಂದರು.
RCB ಆಟಗಾರರನ್ನು ಸ್ವಾಗತಿಸಲು ನೀವ್ಯಾಕ್ರೀ ಹೋಗಿದ್ರಿ?: ಡಿಕೆಶಿ ತರಾಟೆಗೆ ತೆಗೆದುಕೊಂಡ ಸಿಎಂ ಸಿದ್ಧರಾಮಯ್ಯ