ಬೆಂಗಳೂರು: ನಾಳೆಯಿಂದ ರಾಜ್ಯದಲ್ಲಿ ನೈಋತ್ಯ ಮುಂಗಾರು ಮತ್ತೆ ಬಲಗೊಳ್ಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಾಗಲಕೋಟೆ, ಬೆಳಗಾವಿ, ಧಾರವಾಡ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಗದಗ, ಬಳ್ಳಾರಿ, ವಿಜಯನಗರದಲ್ಲಿ ಜೂ.12ರಿಂದ 14ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿತ್ರದುರ್ಗ, ದಾವಣಗೆರೆಯಲ್ಲಿ ಜೂ.13ರಿಂದ 2 ದಿನ, ಕೋಲಾರದಲ್ಲಿ ಜೂ.12ರಂದು ಬಿರುಸಾಗಿ ವರ್ಷಧಾರೆಯಾಗುವ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಇರಲಿದೆ. ಶಿವಮೊಗ್ಗ, ಚಿಕ್ಕಮಗಳೂರಿನಲ್ಲೂ ಜೂ.14ರಂದು ಆರೆಂಜ್ ಅಲರ್ಟ್ ಇರಲಿದೆ.
ಬಳ್ಳಾರಿ, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಜೂ.12ಕ್ಕೆ ವಿಜಯನಗರ, ಕೊಡಗು, ದಾವಣಗೆರೆ, ಚಿಕ್ಕಬಳ್ಳಾಪುರ, ಬಳ್ಳಾರಿ, ವಿಜಯಪುರ, ಕಲಬುರಗಿ, ಬೆಳಗಾವಿ, ಬಾಗಲಕೋಟೆ ಹಾಗೂ ಕರಾವಳಿ ಜಿಲ್ಲೆಯ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ನ ಮುನ್ಸೂಚನೆ ನೀಡಲಾಗಿದೆ.