ಮಂಡ್ಯ : ಮಂಡ್ಯ ಜಿಲ್ಲೆಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಹಳ್ಳದಲ್ಲಿ ಈಜಲು ಹೋಗಿ ಇಬ್ಬರು ಬಾಲಕರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಮದ್ದೂರು ತಾಲೂಕಿನ ಕ್ಯಾತಘಟ್ಟ ಗ್ರಾಮದ ಬಳಿ ಹಳ್ಳದಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ಸಾವನ್ನಪ್ಪಿದ್ದಾರೆ. ಮೃತ ಬಾಲಕರನ್ನು ಆಲಭುಜನಹಳ್ಳಿಯ ಚೇತನ್ (14) ಹಾಗೂ ದರ್ಶನ್ (15) ಎಂದು ಗುರುತಿಸಲಾಗಿದೆ.
ಇಬ್ಬರು ಬಾಲಕರ ಶವಗಳನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಹೊರತೆಗೆದಿದ್ದಾರೆ. ಕೆಎಂ ದೊಡ್ಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.