ದಾವಣಗೆರೆ : ದಾವಣಗೆರೆ ಜಿಲ್ಲೆಯ ಜಗಳೂರು ಪಟ್ಟಣದಲ್ಲಿ ತಡರಾತ್ರಿ ಬಾರೀ ಸ್ಪೋಟದ ಶಬ್ಬ ಕೇಳಿಸಿದ್ದು, ಜನರು ಬೆಚ್ಚಿ ಬಿದ್ದಿರುವ ಘಟನೆ ನಡೆದಿದೆ.
ಜಗಳೂರು ಪಟ್ಟಣದಲ್ಲಿ 5 ದಶಕಗಳ ನಂತರ ರಸ್ತೆ ಅಗಲೀಕರಣ ಕಾಮಗಾರಿ ನಡೆಯುತ್ತಿದ್ದು, ರಸ್ತೆ ಅಗಲೀಕರಣಕ್ಕೆ ಅಡ್ಡಿಯಾಗಿದ್ದ ಬೃಹತ್ ಕಲ್ಲು ಬಂಡೆ, ಕಲ್ಲುಬಂಡೆ ತೆರವು ಮಾಡಲು ಸ್ಪೋಟಕ ಬಳಸಿರುವ ಶಂಕೆ ವ್ಯಕ್ತವಾಗಿದೆ. ಜನವಸತಿ ಪ್ರದೇಶದಲ್ಲಿ ಸ್ಪೋಟಕ ಬಳಸಿದ್ದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.